ಶುಕ್ರವಾರ, ಏಪ್ರಿಲ್ 3, 2020
19 °C

ದುಬಾರೆ ಆನೆ ಕ್ಯಾಂಪ್‌ ಪ್ರವಾಸ: ನೀರಿನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಕುಶಾಲನಗರ: ಪ್ರಸಿದ್ಧ ಪ್ರವಾಸಿ ತಾಣ ಕೊಡಗಿನ ದುಬಾರೆಯಲ್ಲಿರುವ ನದಿಯಲ್ಲಿ‌ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ನಡೆದಿದೆ.

ಗೋಣಿಕೊಪ್ಪ ಬಳಿಯ ಕಳತ್ಮಾಡುವಿನ ಲಯನ್ಸ್ ಶಾಲೆಯ ಶ್ರೇಯಸ್ (14), ನಳಿನ್ (14) ಮೃತ ವಿದ್ಯಾರ್ಥಿಗಳು.

ಸ್ಕೌಟ್ಸ್ & ಗೈಡ್ಸ್ ತಂಡದ 39 ವಿದ್ಯಾರ್ಥಿಗಳು ಪಿಕ್‌ನಿಕ್‌ಗೆಂದು ದುಬಾರೆಗೆ ಆಗಮಿಸಿದಾಗ ದುರ್ಘಟನೆ ನಡೆದಿದೆ. ನೀರಿಗೆ ಇಳಿದಾಗ ವಿದ್ಯಾರ್ಥಿಗಳು ಮುಳುಗಿ ಮೃತಪಟ್ಟಿದ್ದಾರೆ.  

ಡಿಸೆಂಬರ್ ಒಳಗೇ ಪಠ್ಯೇತರ ಚಟುವಟಿಕೆ ಪೂರ್ಣಗೊಳಿಸಬೇಕು. ದುಬಾರೆಗೆ ತೆರಳಲು ಯಾವುದೇ ಅನುಮತಿ ಪಡೆದಿಲ್ಲ. ನಿರ್ಲಕ್ಷ್ಯ ವಹಿಸಿದ ಶಿಕ್ಷಕರು ‌ಹಾಗೂ ಸಂಸ್ಥೆ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಚ್ಚಾದೋ ತಿಳಿಸಿದ್ದಾರೆ.

ಕುಶಾಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು