ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು: ಇಬ್ಬರಲ್ಲಿ ಕೊರೊನಾ ವೈರಸ್‌ ಸೋಂಕಿನ ಶಂಕೆ, ಪ್ರತ್ಯೇಕ ವಾರ್ಡ್‌ಗೆ ದಾಖಲು

Last Updated 16 ಮಾರ್ಚ್ 2020, 14:49 IST
ಅಕ್ಷರ ಗಾತ್ರ

ಮಂಗಳೂರು: ಕೊರೊನಾ ವೈರಸ್‌ ಸೋಂಕು ತಗುಲಿರುವ ಶಂಕೆಯ ಮೇಲೆ ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರನ್ನು ಸೋಮವಾರ ವೈದ್ಯಕೀಯ ನಿಗಾಕ್ಕಾಗಿ ಪ್ರತ್ಯೇಕ ವಾರ್ಡ್‌ಗೆ ದಾಖಲು ಮಾಡಲಾಗಿದೆ.

ಇಬ್ಬರೂ ಇತ್ತೀಚೆಗಷ್ಟೇ ವಿದೇಶಗಳಿಂದ ವಾಪಸಾಗಿದ್ದರು. ಕೆಮ್ಮು, ಶೀತ ಮತ್ತು ಜ್ವರದ ಲಕ್ಷಣಗಳು ಕಂಡುಬಂದ ಕಾರಣದಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಟಲಿನ ದ್ರವದ ಮಾದರಿಗಳನ್ನು ಸಂಗ್ರಹಿಸಿ, ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ.

‘ವಿದೇಶಗಳಿಂದ ಬಂದವರ ಮೇಲೆ ತೀವ್ರ ನಿಗಾ ಇರಿಸಲಾಗಿದೆ. ಅಂತಹವರಲ್ಲಿ ಸೋಂಕಿನ ಲಕ್ಷಣಗಳು ಕಂಡುಬಂದರೆ ತಕ್ಷಣವೇ ಪ್ರತ್ಯೇಕ ವಾರ್ಡ್‌ಗೆ ದಾಖಲಿಸಲಾಗುತ್ತಿದೆ. ಸೋಮವಾರ ಕೂಡ ಇಬ್ಬರನ್ನು ದಾಖಲು ಮಾಡಲಾಗಿದೆ. ಆಸ್ಪತ್ರೆಗೆ ದಾಖಲಿಸಿರುವವರ ಕುರಿತು ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ’ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್‌ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT