ಮಂಗಳವಾರ, ಏಪ್ರಿಲ್ 7, 2020
19 °C

ಸುಳ್ಳು ಸುದ್ದಿ ಸೃಷ್ಟಿಸಿದವರ ಬಂಧನ, ಬಿಡುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಧಾರವಾಡ: ಕೋವಿಡ್-19 ಸೋಂಕು ತಗುಲಿದೆ ಎಂಬ ಸುಳ್ಳು ಸುದ್ದಿಯನ್ನು ಪತ್ರಕರ್ತರೊಬ್ಬರ ಭಾವಚಿತ್ರ ಹಾಗೂ ಕಾಲ್ಪನಿಕ ಹೆಸರನೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿ, ಠಾಣಾ ಜಾಮೀನು ಮೇಲೆ ಬಿಡುಗಡೆ ಮಾಡಿದ್ದಾರೆ.

ಇಲ್ಲಿನ ಹೊಸಯಲ್ಲಾಪುರ ವ್ಯಕ್ತಿಯಲ್ಲಿ ಕೋವಿಡ್–19 ಸೋಂಕು ದೃಢಪಟ್ಟ ಸಂದರ್ಭದಲ್ಲಿ ಇಂಥದ್ದೊಂದು ಸುದ್ದಿ ಹರಿದಾಡಿತ್ತು. ಇದನ್ನು ಹರಿಯಬಿಟ್ಟವರು ಪ್ರಮೋದ ಮಹಾಬಲಶೆಟ್ಟಿ ಹಾಗೂ ಅಭಿಷೇಕ ಮಲ್ಹಾರಿ ಎಂಬುವವರೇ ಎಂದು ಪತ್ತೆ ಮಾಡಿದ ಸೈಬರ್ ಠಾಣೆ ಪೊಲೀಸರು ಇವರನ್ನು ವಶಕ್ಕೆ ಪಡೆದಿದ್ದರು. ಈ ಸಂಬಂಧ ವಿದ್ಯಾಗಿರಿ ಹಾಗೂ ಶಹರ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

ಮಾರ್ಚ್ 22ರಂದು ಸಾಮಾಜಿಕ ಜಾಲತಾಣದಲ್ಲಿ ಈ ಸುಳ್ಳು ಸುದ್ದಿ ಹರಿದಾಡಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಡಳಿತ, ಕ್ರಮ ಕೈಗೊಳ್ಳುವಂತೆ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿತ್ತು. ಇದರ ಆಧಾರದ ಇನ್‌ಸ್ಪೆಕ್ಟರ್ ಪ್ರಭುಗೌಡ ಅವರ ನೇತೃತ್ವದಲ್ಲಿ ತನಿಖೆ ಕೈಗೊಂಡ ಸೈಬರ್ ವಿಭಾಗದ ಪೊಲೀಸರು, ಸುಳ್ಳು ಸುದ್ದಿ ಹರಡಿದ ಈ ಇಬ್ಬರನ್ನು ಬಂಧಿಸಿದ್ದಾರೆ.

ಯುವಕರಿಂದ ಮುಚ್ಚಳಿಕೆ ಬರೆಯಿಸಿಕೊಂಡಿರುವ ಪೊಲೀಸರು, ₹1ಲಕ್ಷ ಮೌಲ್ಯದ ಬಾಂಡ್ ಪಡದು ಠಾಣಾ ಜಾಮೀನು ಮೇಲೆ ಬಿಡುಗಡೆ ಮಾಡಿದ್ದಾರೆ. ಇಂಥ ಕೃತ್ಯಗಳನ್ನು ಮತ್ತೆ ನಡೆಸಿದರೆ ಮೊಕದ್ದಮೆ ದಾಖಲಿಸಿ ₹5ಲಕ್ಷ ದಂಡ ಮತ್ತು ಕಠಿಣ ಕ್ರಮ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ ಎಂದು ಕಮಿಷನರೇಟ್‌ನ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಕೃಷ್ಣಕಾಂತ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು