ನವಯುಗ, ಎನ್ಎಚ್ಎಐ ವಿರುದ್ಧ ವಿಚಾರಣೆಗೆ ಆದೇಶ

7

ನವಯುಗ, ಎನ್ಎಚ್ಎಐ ವಿರುದ್ಧ ವಿಚಾರಣೆಗೆ ಆದೇಶ

Published:
Updated:

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರ ಕಾಮಗಾರಿ ಗುತ್ತಿಗೆ ಪಡೆದು ಸರಿಯಾಗಿ ಕೆಲಸ ನಿರ್ವಹಿಸದೇ ಸತಾಯಿಸುತ್ತಿರುವ ನವಯುಗ ಕನ್‌ಸ್ಟ್ರಕ್ಷನ್ ಕಂಪೆನಿ ವಿರುದ್ಧ ಅಪರಾಧ ದಂಡ‌ ಪ್ರಕ್ರಿಯಾ ಸಂಹಿತೆ ಅಡಿಯಲ್ಲಿ ವಿಚಾರಣೆ ಆರಂಭಿಸುವಂತೆ ನಗರಾಭಿವೃದ್ಧಿ ಮತ್ತು ವಸತಿ ಸಚಿವ ಯು.ಟಿ.ಖಾದರ್ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರಿಗೆ ಶನಿವಾರ ಆದೇಶಿಸಿದರು.

ರಾಷ್ಟ್ರೀಯ ಹೆದ್ದಾರಿಗಳ ಸ್ಥಿತಿಗತಿ ಕುರಿತು ಸಚಿವರು ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪರಿಶೀಲನಾ ಸಭೆ ನಡೆಸಿದರು. ಆಗ ಕಾಮಗಾರಿಯ ಪ್ರಗತಿ ಕುರಿತು ನವಯುಗ ಕಂಪೆನಿ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸರಿಯಾದ ಮಾಹಿತಿ ನೀಡಲಿಲ್ಲ.

ಸಚಿವರು ಕ್ರಮದ ಎಚ್ಚರಿಕೆ ನೀಡಿದ ಬಳಿಕ ಉತ್ತರ ನೀಡಿದ ಪ್ರಾಧಿಕಾರದ ಅಧಿಕಾರಿಗಳು ಕೆಲವು ತಿಂಗಳಿನಿಂದ ಕೆಲಸ‌ ನಡೆಯುತ್ತಿಲ್ಲ ಎಂಬುದನ್ನು ಒಪ್ಪಿಕೊಂಡರು. ಕಾಮಗಾರಿ ಪೂರ್ಣಗೊಳಿಸಲು 2019ರ ಮಾರ್ಚ್ ಅಂತ್ಯದವರೆಗೆ ಕಾಲಾವಕಾಶ ಬೇಕು ಎಂದು ಕೋರಿದರು. ಕಂಪೆನಿ ಆರ್ಥಿಕ ತೊಂದರೆ ಇರುವುದಾಗಿ ಉತ್ತರಿಸಿದರು. ತಕ್ಷಣವೇ ಕಂಪೆನಿ ವಿರುದ್ಧ ವಿಚಾರಣೆಗೆ ಆದೇಶಿಸಿದರು.

'ತಕ್ಷಣವೇ ಪ್ರಕರಣ ದಾಖಲಿಸಿ ವಿಚಾರಣೆ ಆರಂಭಿಸಲಾಗುವುದು. ಇನ್ನು ಮುಂದೆ ಯಾವುದೇ ಅಪಘಾತ ಸಂಭವಿಸಿ, ಪ್ರಾಣ ಹಾನಿಯಾದರೆ ನವಯುಗ ಕಂಪೆನಿ ಪ್ರತಿನಿಧಿಗಳು ಮತ್ತು ಎನ್ಎಚ್ಎಐ ವಿರುದ್ಧ ಕೊಲೆ‌ ಪ್ರಕರಣ ದಾಖಲಿಸುತ್ತೇವೆ' ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದರು.

20 ದಿನಗಳಲ್ಲಿ ಸಂಚಾರ ಆರಂಭ: ಶಿರಾಡಿ ಘಾಟಿ ಮಾರ್ಗದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದೆ ಎಂದು ಲೋಕೋಪಯೋಗಿ ಇಲಾಖೆಯ ರಾಷ್ಟ್ರೀಯ ಹೆದ್ದಾರಿ ವಿಭಾಗದ ಮಂಗಳೂರು ವೃತ್ತದ ಕಾರ್ಯನಿರ್ವಾಹಕ ಎಂಜಿನಿಯರ್ ಸುಬ್ಬರಾಮ ಹೊಳ್ಳ ಮಾಹಿತಿ ನೀಡಿದರು.  ಹದಿನೈದು ದಿನಗಳ ಕ್ಯೂರಿಂಗ್ ಅಗತ್ಯವಿದೆ ಎಂದು ತಿಳಿಸಿದರು.

ಲೋಕೋಪಯೋಗಿ ಇಲಾಖೆ ಹಿರಿಯ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿ‌ ಜುಲೈ 15ರಿಂದ 20ರ ಅವಧಿಯಲ್ಲಿ ಶಿರಾಡಿ ಘಾಟಿ ‌ಮಾರ್ಗವನ್ನು ವಾಹನ ಸಂಚಾರಕ್ಕೆ ಮುಕ್ತಗೊಳಿಸುವಂತೆ ಸಚಿವರು ನಿರ್ದೇಶನ ನೀಡಿದರು.

ಬರಹ ಇಷ್ಟವಾಯಿತೆ?

 • 4

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !