ಬೆಳಗಾವಿಯಿಂದ 15 ವಿಮಾನಗಳ ಹಾರಾಟ ಸೇವೆ

ಬೆಳಗಾವಿ: ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಿಂದ ಕೇಂದ್ರದ ಉಡಾನ್ ಯೋಜನೆಯಲ್ಲಿ 10ರಿಂದ 15 ವಿಮಾನಗಳ ಹಾರಾಟ ಸೇವೆ ಆರಂಭವಾಗಲಿದೆ ಎಂದು ಕೇಂದ್ರ ವಿಮಾನಯಾನ ರಾಜ್ಯ ಸಚಿವ ಜಯಂತ್ ಸಿನ್ಹಾ ಎಂದು ತಿಳಿಸಿದರು.
ಭಾನುವಾರ ಬೆಳಗ್ಗೆ ಸಾಂಬ್ರಾ ನಿಲ್ದಾಣದಲ್ಲಿ ವಿಮಾನ ನಿಲ್ದಾಣದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ದೇಶದ ಅನೇಕ ವಿಮಾನಯಾನ ಸಂಸ್ಥೆಗಳು ಬೆಳಗಾವಿ ವಿಮಾನ ನಿಲ್ದಾಣದ ಮೂಲಕ ತಮ್ಮ ವಿಮಾನ ಹಾರಾಟ ಸೇವೆ ಆರಂಭಿಸಲು ಆಸಕ್ತಿ ತೋರಿಸಿವೆ ಎಂದರು.
ಸಂಸದ ಸುರೇಶ ಅಂಗಡಿ ಮಾತನಾಡಿ ಬೆಳಗಾವಿಯಿಂದ ಕಾರ್ಗೋ ವಿಮಾನಗಳ ಸೇವೆಯನ್ನು ಮತ್ತು ಅಂತರರಾಷ್ಟ್ರೀಯ ವಿಮಾನಗಳ ಹಾರಾಟ ಸೇವೆಯನ್ನು ಆರಂಭಿಸುವಂತೆ ಸಚಿವರಲ್ಲಿ ಮನವಿ ಮಾಡಿದರು. ಜೊತೆಗೆ ಬೆಳಗಾವಿಯಲ್ಲಿ ವಿಮಾನ ಹಾರಾಟ ತರಬೇತಿ ನೀಡುವ ಶಾಲೆ ಆರಂಭಿಸಬೇಕು ಎಂದು ಕೋರಿದರು.
ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು, ಆದಷ್ಟು ಬೇಗನೆ ಈ ಕುರಿತು ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.