ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ ಭೀತಿ: ಸಾಮಾಜಿಕ ಮಾಧ್ಯಮಗಳ ವದಂತಿಗಳಿಂದ ಹೆದರಿ ವ್ಯಕ್ತಿ ಆತ್ಮಹತ್ಯೆ

Last Updated 25 ಮಾರ್ಚ್ 2020, 15:14 IST
ಅಕ್ಷರ ಗಾತ್ರ

ಬ್ರಹ್ಮಾವರ‌ (ಉಡುಪಿ): ಕೊರೊನಾ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಹರಡುತ್ತಿರುವ ವದಂತಿಗಳಿಂದ, ತಮಗೂಸೋಂಕು ತಗುಲಿರಬಹುದು ಎಂದು ಹೆದರಿ ಬ್ರಹ್ಮಾವರದ ಉಪ್ಪೂರು ನರ್ನಾಡಿನ ಗೋಪಾಲಕೃಷ್ಣ ಎಂಬುವವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆಗೂ ಮುನ್ನ ಡೆತ್‌ನೋಟ್‌ ಬರೆದಿಟ್ಟಿದ್ದು, ಕೊರೊನಾ ಶಂಕೆಯ ಭೀತಿಯಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಬರೆದಿದ್ದಾರೆ.

ಮೃತ ವ್ಯಕ್ತಿ ಮಧ್ಯರಾತ್ರಿವರೆಗೂ ಕುಟುಂಬದ ಸದ್ಯಸರ ಬಳಿ ಕೊರೊನಾ ಹರಡುತ್ತಿರುವ ಆತಂಕದ ವಿಚಾರವಾಗಿ ಮಾತನಾಡಿ, ಬೆಳಗಿನ ಜಾವ‌ ಮನೆಯ ಹಿಂಬದಿಯ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಶವವನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿ ನಿರೀಕ್ಷೆಯಲ್ಲಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಗೋಪಾಲಕೃಷ್ಣ ಈಚೆಗೆ ವಾಟ್ಸ್‌ಆ್ಯಪ್‌ ಹಾಗೂ ಜಾಲತಾಣಗಳಲ್ಲಿ ಬರುತ್ತಿದ್ದ ಕೊರೊನಾ ಸಂಬಂಧಿತ ಸುದ್ದಿಗಳನ್ನು ಅತಿಯಾಗಿ ನೋಡಿ ಮಾನಸಿಕ ಒತ್ತಡಕ್ಕೆ ಸಿಲುಕಿದ್ದರು ಎಂಬ ವಿಚಾರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಮೃತ ವ್ಯಕ್ತಿಯಲ್ಲಿ ಸೋಂಕು ಲಕ್ಷಣಗಳು ಇರಲಿಲ್ಲ ಎಂದು ಕುಟುಂಬದ ಸದಸ್ಯರು ಮಾಹಿತಿ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ವ್ಯಕ್ತಿ ಕೆಎಸ್‌ಆರ್‌ಟಿಸಿ ನೌಕರನಾಗಿದ್ದು ಚಾಲಕರಿಗೆ ತರಬೇತಿ ನೀಡುತ್ತಿದ್ದರು ಎಂದು ತಿಳಿದುಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT