ಭಾನುವಾರ, ಜೂಲೈ 5, 2020
28 °C

ಉಡುಪಿ: ಪತ್ತೆಯಾದ 18 ಕೋವಿಡ್ ಸೋಂಕಿತರಲ್ಲಿ ಮೂವರು ಪೊಲೀಸರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಉಡುಪಿ: ಭಾನುವಾರ ಪತ್ತೆಯಾದ 18 ಕೋವಿಡ್ ಸೋಂಕಿತರಲ್ಲಿ ಮೂವರು ಪೊಲೀಸರು ಇದ್ದಾರೆ. ಕಂಟೈನ್‌ಮೆಂಟ್ ಝೋನ್ ಸಂಪರ್ಕದಿಂದ ಕಾರ್ಕಳ ಗ್ರಾಮಾಂತರ ಠಾಣೆ, ಅಜೆಕಾರು ಹಾಗೂ ಬ್ರಹ್ಮಾವರ ಠಾಣೆಯ ಕಾನ್‌ಸ್ಟೇಬಲ್‌ಗಳಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ಸೋಂಕಿತರು ಕಾರ್ಯ ನಿರ್ವಹಿಸುತ್ತಿದ್ದ ಮೂರು ಠಾಣೆಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದ್ದು,  48 ಗಂಟೆಗಳ ಬಳಿಕ ಸ್ಯಾನಿಟೈಸ್ ಮಾಡಿ ಬಳಸಲಾಗುವುದು. ಕಾನ್‌ಸ್ಟೇಬಲ್‌ಗಳ ಪ್ರಾಥಮಿಕ ಸಂಪರ್ಕಿತರನ್ನು ಕ್ವಾರಂಟೈನ್‌ನಲ್ಲಿರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಮಾಹಿತಿ ನೀಡಿದರು.

ತುಂಬು ಗರ್ಭಿಣಿಯಲ್ಲಿ ಸೋಂಕು: ಸೋಂಕಿತರ ಸಂಪರ್ಕಕ್ಕೆ ಬಾರದ ಕಾರ್ಕಳ ತಾಲ್ಲೂಕಿನ 9 ತಿಂಗಳ ತುಂಬು ಗರ್ಭಿಣಿಯಲ್ಲಿ ಸೋಂಕು ಕಂಡುಬಂದಿದೆ. ಗರ್ಭಿಣಿಯ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರನ್ನು ಪತ್ತೆ ಹಚ್ಚಲಾಗುತ್ತಿದೆ ಎಂದು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು