ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಗರ ಸ್ಥಳೀಯ ಸಂಸ್ಥೆಗಳಿಗೆ ಇಂದು ಮತದಾನ

3 ಮಹಾನಗರ ಪಾಲಿಕೆ, 102 ನಗರ ಸಂಸ್ಥೆಗಳ ಚುನಾವಣೆ
Last Updated 30 ಆಗಸ್ಟ್ 2018, 19:30 IST
ಅಕ್ಷರ ಗಾತ್ರ

ಬೆಂಗಳೂರು: ಮೈಸೂರು, ತುಮಕೂರು ಮತ್ತು ಶಿವಮೊಗ್ಗ ಮಹಾನಗರ ಪಾಲಿಕೆಗಳು ಮತ್ತು ಇತರ 102 ನಗರ ಸ್ಥಳೀಯ ಸಂಸ್ಥೆಗಳಿಗೆ ಶುಕ್ರವಾರ ಮತದಾನ ನಡೆಯಲಿದೆ.

ಇದಕ್ಕಾಗಿ ರಾಜ್ಯ ಚುನಾವಣಾ ಆಯೋಗ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಸ್ಥಳೀಯ ಸಂಸ್ಥೆಗಳಲ್ಲಿ ಇದೇ ಮೊದಲ ಬಾರಿಗೆ ಇವಿಎಂಗಳನ್ನು ಬಳಸಲಾಗುತ್ತಿದೆ.

ಮತದಾನ ಬೆಳಿಗ್ಗೆ 7 ರಿಂದ ಆರಂಭವಾಗಿ ಸಂಜೆ 5 ರವರೆಗೆ ನಡೆಯಲಿದೆ. ವಿವಿಧ ರಾಜಕೀಯ ಪಕ್ಷಗಳು ಮತ್ತು ಪಕ್ಷೇತರರು ಸೇರಿ ಒಟ್ಟು 9121 ಅಭ್ಯರ್ಥಿಗಳುಕಣದಲ್ಲಿದ್ದಾರೆ.

ವಿವಿಧ ನಗರಸಭೆಗಳ 12 ವಾರ್ಡ್‌ಗಳು ಮತ್ತು ಪುರಸಭೆಗಳ 17 ವಾರ್ಡ್‌ಗಳಿಗೆ ಒಟ್ಟು 29 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪ್ರಕೃತಿ ವಿಕೋಪದಿಂದಾಗಿ ಕೊಡಗು ಜಿಲ್ಲೆಯ 3 ಪಟ್ಟಣ ಪಂಚಾಯಿತಿಗಳ ಎಲ್ಲ 45 ವಾರ್ಡುಗಳ ಚುನಾವಣೆಯನ್ನು ತಡೆ ಹಿಡಿಯಲಾಗಿದೆ.

ಕಲಬುರಗಿ ಜಿಲ್ಲೆಯ ಅಫಜಲ್‌ಪುರ ಪುರಸಭೆಯ ವಾರ್ಡ್‌ ಸಂಖ್ಯೆ 19 ರ ಎಲ್ಲಾ ಅಭ್ಯರ್ಥಿಗಳ ನಾಮಪತ್ರಗಳು ತಿರಸ್ಕೃತವಾಗಿರುವುದರಿಂದ, ಈ ವಾರ್ಡ್‌ಗೆ ಚುನಾವಣೆ ನಡೆಯುವುದಿಲ್ಲ. ಅಲ್ಲದೆ, ಕೊಳ್ಳೇಗಾಳ ನಗರಸಭೆ ವಾರ್ಡ್‌ ನಂ 9 ರಲ್ಲಿ ಬಿಎಸ್ಪಿ ಅಭ್ಯರ್ಥಿ ನಿಧನರಾಗಿರುವುದರಿಂದ ಅಲ್ಲಿ ಚುನಾವಣೆ ರದ್ದು ಮಾಡಲಾಗಿದೆ ಎಂದು ರಾಜ್ಯ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿ ಎಂ.ಎಸ್‌.ಅರ್ಚನಾ ಹೇಳಿದ್ದಾರೆ. 102 ನಗರ ಸ್ಥಳೀಯ ಸಂಸ್ಥೆಗಳ 2,529 ವಾರ್ಡ್‌ಗಳಲ್ಲಿ 36.03 ಲಕ್ಷ ಮತ್ತು ಮೈಸೂರು, ತುಮಕೂರು ಹಾಗೂ ಶಿವಮೊಗ್ಗ ಮಹಾನಗರ ಪಾಲಿಕೆಗಳ 135 ವಾರ್ಡ್‌ಗಳಲ್ಲಿ 13.33 ಲಕ್ಷ ಮತದಾರರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT