ಬುಧವಾರ, ಜುಲೈ 15, 2020
27 °C

ಬಿಎಸ್‌ವೈ ಭೇಟಿ ಮಾಡಿದ ಕತ್ತಿ: ಸಚಿವ ಸ್ಥಾನದ ಭರವಸೆ ಕೊಟ್ಟ ಸಿಎಂ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಿಜೆಪಿ ಹಿರಿಯ ಶಾಸಕ ಉಮೇಶ ಕತ್ತಿ ಬುಧವಾರ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದು, ಆದಷ್ಟು ಬೇಗ ಸಚಿವರನ್ನಾಗಿ ಮಾಡುತ್ತೇನೆ. ಆ ಬಗ್ಗೆ ತಲೆಕೆಡಿಸಿಕೊಳ್ಳುವುದು ಬೇಡ ಎಂದು ಭರವಸೆ ನೀಡಿದ್ದಾರೆ ಎಂದು ಮೂಲಗಳು ಹೇಳಿವೆ.

ಕಳೆದ ವಾರ ಭೋಜನ ಕೂಟ ನಡೆಸಿದ ಉಮೇಶ್ ಕತ್ತಿ ಇಂದು ಮುಖ್ಯಮಂತ್ರಿಯವರ ಜತೆ ಸುಮಾರು 20 ನಿಮಿಷ ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ಕಳೆದ ವಾರದ ಸಭೆಯಲ್ಲಿ ಶಾಸಕರು ಮತ್ತು ತಮ್ಮ ಮಧ್ಯೆ ನಡೆದ ಮಾತುಕತೆಯ ವಿವರಗಳನ್ನು ನೀಡಿದರು. ಪ್ರತಿಯೊಬ್ಬ ಶಾಸಕನ ಅಭಿಪ್ರಾಯವನ್ನೂ ಅವರು ಹೇಳಿದರು.

ಈ ಸಂದರ್ಭದಲ್ಲಿ ಕತ್ತಿ ತಮ್ಮ ಸಹೋದರ ರಮೇಶ್‌ ಕತ್ತಿ ಅವರಿಗೆ ರಾಜ್ಯಸಭೆಗೆ ಟಿಕೆಟ್‌ ನೀಡುವಂತೆ ಮನವಿ ಮಾಡಿದರು. ಟಿಕೆಟ್‌ ಕೊಡುವ ಅಥವಾ ಬಿಡುವ ವಿಚಾರ ವರಿಷ್ಠರಿಗೆ ಸೇರಿದ್ದು, ಎಲ್ಲವನ್ನೂ ಅವರೇ ನಿರ್ಧರಿಸುತ್ತಾರೆ. ಆದರೆ, ಆದಷ್ಟು ಬೇಗ ಸಚಿವ ಸಂಪುಟ ವಿಸ್ತರಿಸಿ, ನಿನ್ನನ್ನು ಮಂತ್ರಿ ಮಾಡುತ್ತೇನೆ ಎಂದು ಯಡಿಯೂರಪ್ಪ ಭರವಸೆ ನೀಡಿದರು ಎಂದು ಮೂಲಗಳು ಹೇಳಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು