ಭಾನುವಾರ, ಅಕ್ಟೋಬರ್ 20, 2019
22 °C
ಕಡಿಮೆ ಮೊತ್ತದ ಪರಿಹಾರ ನೀಡಿದ್ದಕ್ಕೆ ಕಾಂಗ್ರೆಸ್‌ ಆಕ್ರೋಶ: ಪ್ರತಿಭಟನೆ

ಹುಬ್ಬಳ್ಳಿಗೆ ಆಗಮಿಸಿದ ಸಚಿವೆ ನಿರ್ಮಲಾ ಸೀತಾರಾಮನ್‌: ಮನವಿಗಳ ಮಹಾಪೂರ

Published:
Updated:

ಹುಬ್ಬಳ್ಳಿ: ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲೆಂದು ಶನಿವಾರ ಅವಳಿ ನಗರ  ಹುಬ್ಬಳ್ಳಿ–ಧಾರವಾಡಕ್ಕೆ ಆಗಮಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಸ್ಥಳೀಯ ಸಂಘಟನೆಗಳು ಹಾಗೂ ಕಾಂಗ್ರೆಸ್ ಮುಖಂಡರು ಮನವಿ ಸಲ್ಲಿಸಿದರು‌.

ನೆರೆ ಪರಿಹಾರಕ್ಕೆ ಕೇಂದ್ರ ನೀಡಿರುವ ₹1200 ಕೋಟಿ ಯಾವುದಕ್ಕೂ ಸಾಲುವುದಿಲ್ಲ. ಕೂಡಲೇ ಇದನ್ನು ಹೆಚ್ಚಿಸಬೇಕು ಎಂದು ಮಾಜಿ ಸಂಸದ ಐ.ಜಿ. ಸನದಿ ಮನವಿ ಕೊಟ್ಟರು. ಬ್ಯಾಂಕಿಂಗ್ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ಅನೇಕ ಸಮಸ್ಯೆಗಳು ಇವೆ. ಅವುಗಳನ್ನು ಪರಿಹರಿಸಬೇಕು ಎಂದು ಮನವಿ ಮಾಡಿದರು.

ಕಾರ್ಯಕರ್ತರು ವಶಕ್ಕೆ: ಕಡಿಮೆ ಪರಿಹಾರ ನೀಡಿದ್ದನ್ನು ಖಂಡಿಸಿ  ಕಾಂಗ್ರೆಸ್ ಮಹಿಳಾ ಕಾರ್ಯಕರ್ತರು ನಿರ್ಮಲಾ ಸೀತಾರಾಮನ್ ಎದುರು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದರು. ಆದ್ದರಿಂದ ಪೊಲೀಸರು, ಕಾರ್ಯಕರ್ತರನ್ನು ವಿಮಾನ ನಿಲ್ದಾಣದ ಒಳಗೆ ಬಿಡದೆ ವಶಕ್ಕೆ ಪಡೆದರು.

Post Comments (+)