ಸೋಮವಾರ, ನವೆಂಬರ್ 18, 2019
28 °C

ಕೊಲ್ಲೂರಿಗೆ ಕೇಂದ್ರ ಸಚಿವ ವಿ. ಮುರಳೀಧರನ್‌ ಭೇಟಿ

Published:
Updated:
Prajavani

ಕುಂದಾಪುರ: ಕೊಲ್ಲೂರಿನ ಶ್ರೀಮೂಕಾಂಬಿಕಾ ದೇವಸ್ಥಾನಕ್ಕೆ ಗುರುವಾರ ಬೆಳಿಗ್ಗೆ ಭೇಟಿ ನೀಡಿದ ಕೇಂದ್ರ ವಿದೇಶಾಂಗ ವ್ಯವಹಾರ ಹಾಗೂ ಸಂಸದೀಯ ವ್ಯವಹಾರಗಳ ರಾಜ್ಯ ಖಾತೆ ಸಚಿವ ವಿ. ಮುರಳೀಧರನ್‌ ಅವರು ದೇವಿಯ ದರ್ಶನ ಪಡೆದು, ಪೂಜೆ ಸಲ್ಲಿಸಿದರು.

ಬುಧವಾರ ರಾತ್ರಿ ಪತ್ನಿ ಕೆ.ಎಸ್‌. ಜಯಶ್ರೀ ಅವರೊಂದಿಗೆ ಕೊಲ್ಲೂರಿಗೆ ಬಂದು ವಾಸ್ತವ್ಯ ಹೂಡಿದ್ದ ಅವರು, ಬೆಳಿಗ್ಗೆ ದೇವರ ದರ್ಶನ ಪಡೆದರು. ಸಚಿವರನ್ನು ದೇವಸ್ಥಾನದ ವತಿಯಿಂದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಹರೀಶ್‌ಕುಮಾರ ಶೆಟ್ಟಿ ಗೌರವಿಸಿದರು. ಕಾರ್ಯನಿರ್ವಹಣಾಧಿಕಾರಿ ಕೃಷ್ಣಮೂರ್ತಿ ಇದ್ದರು.

ಪ್ರತಿಕ್ರಿಯಿಸಿ (+)