ಬುಧವಾರ, ಸೆಪ್ಟೆಂಬರ್ 18, 2019
28 °C

ನೆರೆ ಸಂತ್ರಸ್ತರ ಪರಿಹಾರ ನಿಧಿಗೆ ₹5 ಲಕ್ಷ ದೇಣಿಗೆ ನೀಡಿದ ನಟ ಉಪೇಂದ್ರ

Published:
Updated:

ಬೆಂಗಳೂರು: ನಟ, ನಿರ್ದೇಶಕ ಉಪೇಂದ್ರ ಅವರು ನೆರೆ ಸಂತ್ರಸ್ತರ ಪರಿಹಾರ ನಿಧಿಗೆ ₹5 ಲಕ್ಷ ದೇಣಿಗೆ ನೀಡಿದ್ದಾರೆ. 

ಗುರುವಾರ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರನ್ನು ಭೇಟಿಯಾದ ನಟ ಉಪೇಂದ್ರ ಅವರು, ದೇಣಿಗೆಯ ಚೆಕ್ ಅನ್ನು  ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಿದರು. ಚೆಕ್‌ ಅನ್ನು ಮುಖ್ಯಮಂತ್ರಿ ಸ್ವೀಕರಿಸಿದರು.

ಇದಕ್ಕೂ ಹಿಂದೆ ಆಗಸ್ಟ್‌ 8ರಂದು ಟ್ವೀಟ್‌ ಮಾಡಿದ್ದ ನಟ ಉಪೇಂದ್ರ, ತಾವು ನೆರೆ ಸಂತ್ರಸ್ತರ ಪರಿಹಾರ ನಿಧಿಗೆ ₹5 ಲಕ್ಷ ದೇಣಿಗೆ ನೀಡುತ್ತಿರುವುದಾಗಿ ಘೋಷಿಸಿದ್ದರು. ಅಲ್ಲದೆ, ಸಾರ್ವಜನಿಕರೂ ಇಚ್ಚಾ‌ನುಸಾರ ನೆರವು ನೀಡಬೇಕಾಗಿ ಕೋರಿದ್ದರು. 

Post Comments (+)