ಗುರುವಾರ , ಮಾರ್ಚ್ 23, 2023
28 °C
ಮೂಲ ಸೌಕರ್ಯ ಭಾಗಶಃ ಪೂರ್ಣಗೊಂಡರೂ ನಿವೇಶನ ಮಾರಾಟಕ್ಕೆ ಅವಕಾಶ

ನಗರ ಯೋಜನಾ ಕಾಯ್ದೆ ತಿದ್ದುಪಡಿ: ಸಂಪುಟ ಒಪ್ಪಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಡಾವಣೆಗಳಲ್ಲಿ ಮೂಲ ಸೌಕರ್ಯ ಭಾಗಶಃ ಪೂರ್ಣಗೊಳಿಸಿದ್ದರೂ ನಿವೇಶನ ಮಾರಾಟಕ್ಕೆ ಅವಕಾಶ ನೀಡಲು ನಗರ ಯೋಜನಾ ಕಾಯ್ದೆ ತಿದ್ದುಪಡಿಗೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ಇಲ್ಲಿಯವರೆಗೆ ಪೂರ್ಣ ಪ್ರಮಾಣದಲ್ಲಿ ಮೂಲ ಸೌಕರ್ಯ ಕಲ್ಪಿಸಿದ ನಂತರವೇ ನಿವೇಶನ ಮಾರಾಟಕ್ಕೆ ಒಪ್ಪಿಗೆ ನೀಡಲಾಗುತ್ತಿತ್ತು ಎಂದು ಸಂಪುಟ ಸಭೆಯ ಬಳಿಕ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಸುದ್ದಿಗಾರರಿಗೆ ತಿಳಿಸಿದರು.

ಬಿಲ್ಡರ್‌ಗಳು ಮೂಲ ಸೌಕರ್ಯವನ್ನು ಒದಗಿಸದೇ ನಿವೇಶನದಾರರಿಗೆ ಆಟವಾಡಿಸುತ್ತಿದ್ದರು. ಅದಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಕಠಿಣ ನಿಯಮ ಜಾರಿಗೆ ತರಲಾಗಿತ್ತು. ಈಗ ಪರಿಸ್ಥಿತಿ ಬೇರೆಯೇ ಆಗಿರುವುದರಿಂದ ರಿಯಲ್‌ ಎಸ್ಟೇಟ್‌ ಉದ್ಯಮಕ್ಕೆ ಷರತ್ತು ಬದ್ಧವಾಗಿ ಅವಕಾಶ ನೀಡಲು ತೀರ್ಮಾನಿಸಿದ್ದೇವೆ ಎಂದರು.

ಹೊಸ ನಿಯಮದ ಪ್ರಕಾರ, ಒಟ್ಟು ನಿವೇಶನಗಳ ಪೈಕಿ ಮೊದಲ ಹಂತದಲ್ಲಿ ಶೇ 40 ರಷ್ಟು ಮೂಲ ಸೌಕರ್ಯ ಕಲ್ಪಿಸಿ ಮಾರಬಹುದು. ಆ ಬಳಿಕ ಎರಡು ಹಂತಗಳಲ್ಲಿ ಶೇ 30 ರಂತೆ ಮೂಲ ಸೌಕರ್ಯಗಳನ್ನು ಕಲ್ಪಿಸಿ ನಿವೇಶನಗಳನ್ನು ಮಾರಾಟ ಮಾಡಬಹುದು. ಯೋಜನೆ ಅನುಮತಿ ಪಡೆಯುವುದು ಕಡ್ಡಾಯ ಎಂದು ಮಾಧುಸ್ವಾಮಿ ತಿಳಿಸಿದರು.

ಪ್ರಮುಖ ಅಂಶಗಳು

l ಹೊಳೆನರಸೀಪುರ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆ ಮತ್ತು ಸರ್ಕಾರಿ ಬಾಲಕರ ಮಾಧ್ಯಮಿಕ ಶಾಲೆಗೆ ಸೇರಿದ 9194.56 ಚ.ಮೀ.ವಿಸ್ತೀರ್ಣವುಳ್ಳ ಜಮೀನನ್ನು ಮಹಿಳಾ ಪಾಲಿಟೆಕ್ನಿಕ್ ನಿರ್ಮಿಸಲು ತಾಂತ್ರಿಕ ಶಿಕ್ಷಣ ಇಲಾಖೆಗೆ ಹಸ್ತಾಂತರಕ್ಕೆ ಒಪ್ಪಿಗೆ.

l ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿನ ಪರಿಶಿಷ್ಟ ಜಾತಿ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳು,
ವಸತಿ ಶಾಲೆ ವಿದ್ಯಾರ್ಥಿಗಳಿಗೆ ಆಹಾರ ಪದಾರ್ಥ, ಸಮವಸ್ತ್ರ,
ಶುಚಿ ಸಂಭ್ರಮ ಕಿಟ್ ಖರೀದಿಗೆ ಒಪ್ಪಿಗೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು