ಶುಕ್ರವಾರ, ಜನವರಿ 24, 2020
17 °C

ಉಸ್ತಾದ್ ಹಮೀದ್ ಖಾನ್ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಧಾರವಾಡ: ಹಿರಿಯ ಸಿತಾರ್ ವಾದಕ ಉಸ್ತಾದ್ ಅಬ್ದುಲ್ ಹಮೀದ್ ಖಾನ್ (68) ಅವರು ಇಲ್ಲಿನ ಶ್ರೀರಾಮನಗರದಲ್ಲಿನ ತಮ್ಮ ನಿವಾಸದಲ್ಲಿ ಶನಿವಾರ ನಿಧನರಾದರು.

ಅವರಿಗೆ ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದಾರೆ. ಅಂತ್ಯಕ್ರಿಯೆ ಶನಿವಾರ ನಡೆಯಿತು.

ಇಂದೋರ್ ಬೀನ್‌ಕಾರ್‌ ಘರಾಣೆಯ ಆರನೇ ತಲೆಮಾರಿನವರಾದ ಅವರು ಕರ್ನಾಟಕ ವಿಶ್ವವಿದ್ಯಾಲಯದ ಸಂಗೀತ ಹಾಗೂ ಲಲಿತಕಲಾ ಕಾಲೇಜಿನ ಪ್ರಾಚಾರ್ಯರಾಗಿದ್ದರು. ಮೈಸೂರಿನಲ್ಲಿರುವ ಗಂಗೂಬಾಯಿ ಹಾನಗಲ್ ಸಂಗೀತ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿದ್ದರು. ಕರ್ನಾಟಕ ವಿಶ್ವವಿದ್ಯಾಲಯ, ಗೋವಾ, ಗುಲಬರ್ಗಾ, ಹಂಪಿ ವಿಶ್ವವಿದ್ಯಾಲಯಗಳ ವಿವಿಧ ಮಂಡಳಿಗಳ ಸದಸ್ಯರಾಗಿದ್ದರು.

30 ವರ್ಷಗಳಿಂದಲೂ ಸತತವಾಗಿ ಆಕಾಶವಾಣಿ ಮತ್ತು ದೂರದರ್ಶನಗಳಲ್ಲಿ ಕಾರ್ಯಕ್ರಮಗಳನ್ನು ನೀಡಿದ್ದಾರೆ. ದೇಶದ ವಿವಿಧ ನಗರಗಳಲ್ಲಿ ಮಾತ್ರವಲ್ಲದೇ, ಫ್ರಾನ್ಸ್, ಜರ್ಮನಿ, ಸ್ವಿಟ್ಜರ್ಲೆಂಡ್‌ನಲ್ಲೂ ಕಾರ್ಯಕ್ರಮಗಳನ್ನು ಕೊಟ್ಟಿದ್ದಾರೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು