ಶುಕ್ರವಾರ, ಆಗಸ್ಟ್ 23, 2019
26 °C

ಸ್ಥಳೀಯ ಸಂಸ್ಥೆಗಳ ‌ವಾಣಿಜ್ಯ‌ ಮಳಿಗೆ ಬಾಡಿಗೆಗೆ ಏಕರೂಪದ ನೀತಿ: ಸಚಿವ ಖಾದರ್

Published:
Updated:

ಮಂಗಳೂರು: ರಾಜ್ಯದಾದ್ಯಂತ ನಗರ ಸ್ಥಳೀಯ ಸಂಸ್ಥೆಗಳ ವಾಣಿಜ್ಯ ಮಳಿಗೆಗಳನ್ನು ಬಾಡಿಗೆ ನೀಡುವ‌ ಸಂಬಂಧ ಏಕರೂಪದ ನೀತಿಯನ್ನು ಜಾರಿಗೆ ತರಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ತಿಳಿಸಿದರು.

ಈ ಮೊದಲು ನಗರ ಸ್ಥಳೀಯ ಸಂಸ್ಥೆಗಳ ವಾಣಿಜ್ಯ ಸಂಕೀರ್ಣಗಳ ಬಾಡಿಗೆಗೆ ಸಂಬಂಧಿಸಿದಂತೆ ಒಂದೊಂದು ಕಡೆ ಒಂದೊಂದು ನಿಯಮ ಇತ್ತು. ಅದನ್ನು‌ ನಿವಾರಿಸಿ, ರಾಜ್ಯದಲ್ಲಿ‌ ಏಕರೂಪದ ನೀತಿಯನ್ನು ಜಾರಿಗೆ ತರಲಾಗಿದೆ ಎಂದರು.

ಪಿ.ಜಿ.ಗಳಿಗೆ ಸಂಬಂಧಿಸಿದಂತೆ ನೀತಿಯನ್ನು ರೂಪಿಸಲಾಗುತ್ತಿದ್ದು, ಕರಡು ಪ್ರತಿಯನ್ನು ಸಿದ್ಧಪಡಿಸಲಾಗಿದೆ. ಆಕ್ಷೇಪಣೆಗಳನ್ನು ಆಹ್ವಾನಿಸಿದ್ದು, ನಂತರ ನೀತಿಯನ್ನು ಜಾರಿಗೆ ತರಲಾಗುವುದು ಎಂದು ಹೇಳಿದರು.
ರಾಜ್ಯದ ಸಮ್ಮಿಶ್ರ ಸರ್ಕಾರ ಸುಭದ್ರವಾಗಿದ್ದು, ಗುರುವಾರ ಮಂಡನೆ ಆಗುವ ವಿಶ್ವಾಸಮತದಲ್ಲಿ ಜಯ ಗಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇಲ್ಲಿ ಯಾರೂ ಅತೃಪ್ತರಿಲ್ಲ. ಎಲ್ಲರೂ ನಮ್ಮ ಸಹೋದ್ಯೋಗಿಗಳು. ಸಣ್ಣಪುಟ್ಟ ಭಿನ್ನಾಭಿಪ್ರಾಯ ಇರುವುದು ಸಹಜ. ಅದನ್ನು ಹಿರಿಯರು ಪರಿಹರಿಸಲಿದ್ದಾರೆ ಎಂದರು.

ರಾಜ್ಯದಲ್ಲಿ‌ ಸಮ್ಮಿಶ್ರ ಸರ್ಕಾರ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಸಾಲಮನ್ನಾ‌ ಮಾಡುವುದು ಹೇಗೆ ಎನ್ನುವುದನ್ನು ಇಡೀ‌ ದೇಶಕ್ಕೆ ತೋರಿಸಿಕೊಟ್ಟಿದೆ. ಔರಾದ್ಕರ‌ ವರದಿ ಜಾರಿಗೆ ತರುವ‌ ಮೂಲಕ ಪೊಲೀಸರ ಬೇಡಿಕೆಗೆ ಸ್ಪಂದಿಸಿದೆ ಎಂದು ತಿಳಿಸಿದರು.

Post Comments (+)