ಭಾನುವಾರ, ಮೇ 24, 2020
27 °C

ಉತ್ತರ ಕನ್ನಡ ಕೋವಿಡ್: 20 ಮಂದಿ ಗುಣಮುಖ, ಅಸ್ಪತ್ರೆಯಿಂದ ಬಿಡುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

 

ಕಾರವಾರ: ಇಲ್ಲಿನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಕೋವಿಡ್ ವಾರ್ಡ್ನಲ್ಲಿ ಚಿಕಿತ್ಸೆ ಪಡೆದು ಗುಣಮುಖರಾದ 20 ಮಂದಿಯನ್ನು ಶನಿವಾರ ಬಿಡುಗಡೆ ಮಾಡಲಾಯಿತು.

ಸಂಸ್ಥೆಯ ಹೊರಭಾಗದಲ್ಲಿ ಹಮ್ಮಿಕೊಂಡ ಸರಳ ಸಮಾರಂಭದಲ್ಲಿ ವೈದ್ಯಾಧಿಕಾರಿಗಳು ಮತ್ತು ಜಿಲ್ಲಾಡಳಿತದ ಅಧಿಕಾರಿಗಳು ಚಪ್ಪಾಳೆ ತಟ್ಟಿ, ಸಿಹಿ ನೀಡಿದರು. ಜೊತೆಗೇ ಸೋಂಕುಮುಕ್ತರಾದ ಬಗ್ಗೆ ಪ್ರಮಾಮಪತ್ರ ನೀಡಿದರು.

ಗುಣಮುಖರಾದವರ ಪೈಕಿ 83 ವರ್ಷದ ಹಿರಿಯರು ಹಾಗೂ ಒಂದು ವರ್ಷದ ಹೆಣ್ಣು ಮಗು ಸೇರಿದ್ದಾರೆ.  ಎಲ್ಲರೂ ಭಟ್ಕಳದವರಾಗಿದ್ದು, ಕಳೆದ 16 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಹಾಗೂ ಸೌಲಭ್ಯಗಳು ಅತ್ಯುತ್ತಮ ರೀತಿಯಲ್ಲಿದ್ದು, ಬಹಳ ಸೂಕ್ತವಾಗಿ ನೋಡಿಕೊಂಡರು ಎಂದು ಗುಣಮುಖರಾದವರು ಸಂತಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್, ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು, ಜಿಲ್ಲಾ ಪಂಚಾಯ್ತಿ ಸಿ.ಇ.ಒ ಮೊಹಮ್ಮದ್ ರೋಶನ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಅಶೋಕಕುಮಾರ್, ಜಿಲ್ಲಾ ಸರ್ಜನ್ ಡಾ.ಶಿವಾನಂದ ಕುಡ್ತಲಕರ್ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು