ಆ.2ರಂದು ಬಂದ್ ಇಲ್ಲ

7
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಅಧ್ಯಕ್ಷ ಸೋಮಶೇಖರ ಕೋತಂಬರಿ

ಆ.2ರಂದು ಬಂದ್ ಇಲ್ಲ

Published:
Updated:
Deccan Herald

ಹಾವೇರಿ:  ಉತ್ತರ ಕರ್ನಾಟಕದ ಸಮಸ್ಯೆಗಳ ಕುರಿತು 15 ದಿನಗಳ ಒಳಗಾಗಿ ಸಭೆ ಕರೆದು ಚರ್ಚಿಸುತ್ತೇನೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ಆ.2ರ ಬಂದ್ ಅನ್ನು ಹಿಂಪಡೆಯಲಾಗಿದೆ ಎಂದು ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಅಧ್ಯಕ್ಷ ಸೋಮಶೇಖರ ಕೋತಂಬರಿ ತಿಳಿಸಿದರು.

ಈ ಕುರಿತು ‘ಪ್ರಜಾವಾಣಿ’ ಜೊತೆ ಮಾತನಾಡಿದ ಅವರು, ‘ಉತ್ತರ ಕರ್ನಾಟಕಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸುವುದಾಗಿ ಮಂಗಳವಾರ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ. ಬೆಳಗಾವಿಯನ್ನು 2ನೇ ರಾಜಧಾನಿಯಾಗಿ ಅಭಿವೃದ್ಧಿ ಪಡಿಸುವುದು, ಉಪ ಲೋಕಾಯುಕ್ತ ಹಾಗೂ ಇಲಾಖೆಗಳ ಕಚೇರಿಗಳು ಅಥವಾ ಪ್ರಾದೇಶಿಕ ಕಚೇರಿಗಳನ್ನು ಉತ್ತರ ಕರ್ನಾಟಕ ಭಾಗದಲ್ಲಿ ಸ್ಥಾಪಿಸುವುದು. ನೀರಾವರಿಗೆ ಆದ್ಯತೆ ನೀಡುವುದು, ರೈತರ ₹1 ಲಕ್ಷ ತನಕದ ಚಾಲ್ತಿ ಸಾಲ ಮನ್ನಾ ಮತ್ತಿತರ ಬೇಡಿಕೆಗಳಿಗೆ ಸ್ಪಂದಿಸುವುದಾಗಿ ಅವರು ತಿಳಿಸಿದ್ದಾರೆ. ಅಲ್ಲದೇ, ಉತ್ತರ ಕರ್ನಾಟಕದಲ್ಲಿ ಸ್ವತಃ ಪ್ರವಾಸ ಮಾಡುವುದಾಗಿಯೂ ಹೇಳಿದ್ದಾರೆ.  ಹೀಗಾಗಿ, ಬಂದ್ ಹಿಂಪಡೆದಿದ್ದು, ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸುತ್ತೇವೆ ಎಂದರು.

Tags: 

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !