ಉತ್ತರ ಕರ್ನಾಟಕದಲ್ಲಿ ಬಿಗಿ ಭದ್ರತೆ

7

ಉತ್ತರ ಕರ್ನಾಟಕದಲ್ಲಿ ಬಿಗಿ ಭದ್ರತೆ

Published:
Updated:

ಬೆಂಗಳೂರು: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕಾಗಿ ಆಗಸ್ಟ್‌ 2ರಂದು (ಗುರುವಾರ) ನಡೆಯುವ ಬಂದ್‌ ವೇಳೆ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.

‘ಅನಾಹುತಗಳು ಸಂಭವಿಸಬಾರದೆಂದು ಮುಂಜಾಗ್ರತಾ ಕ್ರಮವಾಗಿ ಭದ್ರತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವವರನ್ನು ಬಂಧಿಸಲೂ ಸೂಚಿಸಲಾಗಿದೆ’ ಎಂದು ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಕಮಲ್ ಪಂತ್ ‘ಪ್ರಜಾವಾಣಿ’ಗೆ ತಿಳಿಸಿದರು.

‘ಆಯಾ ಜಿಲ್ಲೆಯ ವರಿಷ್ಠಾಧಿಕಾರಿಗಳಿಗೆ ಭದ್ರತೆಯ ಉಸ್ತುವಾರಿ ವಹಿಸಲಾಗಿದೆ. ಕೆಎಸ್‌ಆರ್‌ಪಿಯ 25 ತುಕಡಿಗಳನ್ನು ಹೆಚ್ಚುವರಿಯಾಗಿ ನಿಯೋಜಿಸಲಾಗಿದೆ’ ಎಂದರು. 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !