ಕಾಂಗ್ರೆಸ್ ತೊರೆದ ಮಾಜಿ ಸಚಿವ ವೈಜನಾಥ ಪಾಟೀಲ

ಸೋಮವಾರ, ಮಾರ್ಚ್ 25, 2019
33 °C

ಕಾಂಗ್ರೆಸ್ ತೊರೆದ ಮಾಜಿ ಸಚಿವ ವೈಜನಾಥ ಪಾಟೀಲ

Published:
Updated:
Prajavani

ಕಲಬುರ್ಗಿ: ಮಾಜಿ ಸಚಿವ ಹಾಗೂ ಹೈದರಾಬಾದ್ ಕರ್ನಾಟಕ ಹೋರಾಟ ಸಮಿತಿ ಅಧ್ಯಕ್ಷ ವೈಜನಾಥ ಪಾಟೀಲ ಅವರು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಶುಕ್ರವಾರ ರಾಜೀನಾಮೆ ನೀಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ. ಈ ಕುರಿತು ‘ಪ್ರಜಾವಾಣಿ’ ಜತೆ ಮಾತನಾಡಿದ ಅವರು, ‘371 (ಜೆ) ಕಾಯ್ದೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುತ್ತಿಲ್ಲ. ಈ ಭಾಗದ ಖಾಲಿ ಹುದ್ದೆಗಳನ್ನು ಭರ್ತಿ ಮಾಡುತ್ತಿಲ್ಲ. ಹೈದರಾಬಾದ್ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಎಚ್‌ಕೆಆರ್‌ಡಿಬಿ)ಅನುದಾನ ಪೂರ್ಣವಾಗಿ ಖರ್ಚಾಗುತ್ತಿಲ್ಲ. ಇದರಿಂದ ನೊಂದು ರಾಜೀನಾಮೆ ಸಲ್ಲಿಸಿದ್ದೇನೆ’ ಎಂದು ತಿಳಿಸಿದರು.

ಬರಹ ಇಷ್ಟವಾಯಿತೆ?

 • 5

  Happy
 • 0

  Amused
 • 0

  Sad
 • 1

  Frustrated
 • 0

  Angry

Comments:

0 comments

Write the first review for this !