30 ನಾಮಪತ್ರ ತಿರಸ್ಕೃತ

ಬುಧವಾರ, ಏಪ್ರಿಲ್ 24, 2019
31 °C

30 ನಾಮಪತ್ರ ತಿರಸ್ಕೃತ

Published:
Updated:

ಬೆಂಗಳೂರು: ಎರಡನೇ ಹಂತದ ಚುನಾವಣೆ ನಡೆಯುವ 14 ಲೋಕಸಭಾ ಕ್ಷೇತ್ರಗಳ ನಾಮಪತ್ರ ಪರಿಶೀಲನೆ ಶುಕ್ರವಾರ ನಡೆದಿದ್ದು, 30 ನಾಮಪತ್ರಗಳನ್ನು ತಿರಸ್ಕರಿಸಲಾಗಿದೆ. 288 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ.

ಒಟ್ಟು 318 ಅಭ್ಯರ್ಥಿಗಳು 457 ನಾಮಪತ್ರಗಳನ್ನು ಸಲ್ಲಿಸಿದ್ದರು. ನಾಮಪತ್ರ ಹಿಂದಕ್ಕೆ ಪಡೆಯಲು ಏ. 8 ಕೊನೆಯ ದಿನವಾಗಿದೆ. ಇದೇ 23 ರಂದು ಎರಡನೇ ಹಂತ ಮತದಾನ ನಡೆಯಲಿದೆ.

ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಗುಲಬರ್ಗಾ, ರಾಯಚೂರು, ಬೀದರ್‌, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರಕನ್ನಡ, ದಾವಣಗೆರೆ, ಶಿವಮೊಗ್ಗದಲ್ಲಿ ಎರಡನೇ ಹಂತದ ಮತದಾನ ನಡೆಯಲಿದೆ. ಬೆಳಗಾವಿಯಲ್ಲಿ ಅತಿ ಹೆಚ್ಚು (65) ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !