ಮಂಗಳವಾರ, ಏಪ್ರಿಲ್ 13, 2021
30 °C
ಕರ್ನಾಟಕ ರಸ್ತೆ ಸಾರಿಗೆ ಸಿಬ್ಬಂದಿಯನ್ನು ಸರ್ಕಾರಿ ನೌಕರರೆಂದು ಪರಿಗಣಿಸಲು ಆಗ್ರಹ

ಜುಲೈ 12ರಂದು ಸಾಂಕೇತಿಕ ಧರಣಿ: ವಾಟಾಳ್‌ ನಾಗರಾಜ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಬ್ಬಳ್ಳಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಿಬ್ಬಂದಿಯನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕು ಎಂದು ಆಗ್ರಹಿಸಿ ಜುಲೈ 12ರಂದು ಕಪ್ಪುಪಟ್ಟಿ ಧರಿಸಿ ರಾಜ್ಯದಾದ್ಯಂತ ಸಾಂಕೇತಿಕ ಧರಣಿ ನಡೆಸಲಾಗುವುದು ಎಂದು ಕನ್ನಡ ಚಳವಳಿ ವಾಟಾಳ್‌ ಪಕ್ಷದ ಅಧ್ಯಕ್ಷ ವಾಟಾಳ್‌ ನಾಗರಾಜ್‌ ತಿಳಿಸಿದರು.

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ಎಲ್ಲ ನೌಕರರು ಈ ಧರಣಿಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.

ನೆರೆಯ ಆಂಧ್ರಪ್ರದೇಶದಲ್ಲಿ ಈಗಾಗಲೇ ಅಲ್ಲಿಯ ರಾಜ್ಯ ರಸ್ತೆ ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಿ, ಸವಲತ್ತು ನೀಡುತ್ತಿದ್ದು, ಅದೇ ಮಾದರಿ ರಾಜ್ಯದಲ್ಲೂ ಜಾರಿಯಾಗಬೇಕು ಎಂದು ಅವರು ಒತ್ತಾಯಿಸಿದರು.

ಧರಣಿ: ಉತ್ತರ ಕರ್ನಾಟಕ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್‌ ಘೋಷಣೆ ಮಾಡುವುದು ಸೇರಿದಂತೆ ನಂಜುಂಡಪ್ಪ ವರದಿ ಅನುಷ್ಠಾನಕ್ಕೆ ಆದ್ಯತೆ ನೀಡುವಂತೆ ಆಗ್ರಹಿಸಿ ಆಗಸ್ಟ್‌ ಮೊದಲ ವಾರದಿಂದ ಬೀದರ್‌ನಿಂದ ಆರಂಭಗೊಂಡು ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳ ಕಚೇರಿ ಎದುರು ಒಂದೊಂದು ದಿನ ಧರಣಿ ನಡೆಸುವುದಾಗಿ ಅವರು ಹೇಳಿದರು.

ಉತ್ತರ ಕರ್ನಾಟಕ ಅಭಿವೃದ್ಧಿಗೆ ರಾಜ್ಯ ಸರ್ಕಾರ ಇದುವರೆಗೆ ಎಷ್ಟು ಹಣ ಖರ್ಚು ಮಾಡಿದೆ ಎಂಬುದರ ಕುರಿತು ಮುಂಬರುವ ಅಧಿವೇಶನದಲ್ಲಿ  ಶ್ವೇತಪತ್ರ ಹೊರಡಿಸಬೇಕು ಎಂದು ಅವರು ಆಗ್ರಹಿಸಿದರು.

ಔರದಕರ್‌ ವರದಿ ಜಾರಿಗೆ ಆಗ್ರಹ: ರಾಜ್ಯದಲ್ಲಿ ಪೊಲೀಸರ ಸ್ಥಿತಿ ಶೋಚನೀಯವಾಗಿದ್ದು, ಪೊಲೀಸ್‌ ಇಲಾಖೆ ಸುಧಾರಣೆಗಾಗಿ ಔರದಕರ್‌ ಸಮಿತಿ ನೀಡಿರುವ ವರದಿ ಜಾರಿಗೆ ಸರ್ಕಾರ ತಕ್ಷಣ ಕ್ರಮಕೈಗೊಳ್ಳಬೇಕು ಎಂದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು