ಗುರುವಾರ , ಫೆಬ್ರವರಿ 27, 2020
19 °C

ಬೇಕಾಬಿಟ್ಟಿ ನಂಬರ್ ಪ್ಲೇಟ್: ಕ್ರಮಕ್ಕೆ ಹೈಕೋರ್ಟ್‌ ನಿರ್ದೇಶನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ (ಎಚ್‌ಎಸ್‌ಆರ್‌ಪಿ) ಅಳವಡಿಸದೇ ಇರುವ ಹಾಗೂ ನಿಗದಿತ ನಮೂನೆಯಲ್ಲಿ ನಂಬರ್‌ ಪ್ಲೇಟ್‌ ಇರದ ವಾಹನಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ, ತಕ್ಕ ಕ್ರಮ ಕೈಗೊಳ್ಳಿ’ ಎಂದು ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.

ವಕೀಲ ಕೆ. ಬಿ. ವಿಜಯಕುಮಾರ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್‌ ಎಸ್. ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ಸರ್ಕಾರದ ಪರ ವಕೀಲ ವಿ.ಶ್ರೀನಿಧಿ, ‘2019ರ ಏಪ್ರಿಲ್‌ನಿಂದ ಆಗಸ್ಟ್‌ವರೆಗೆ ಅವಧಿಯಲ್ಲಿ 1,71,157 ವಾಹನಗಳನ್ನು ಪರಿಶೀಲಿಸಿ, ‘ಎಚ್‌ಎಸ್‌ಆರ್‌ಪಿ’ (ಗರಿಷ್ಠ ಭದ್ರತೆಯ ನೋಂದಣಿ ಫಲಕ) ಅಳವಡಿಸದೇ ಇರುವ ವಾಹನಗಳ ವಿರುದ್ಧ 6,207 ಪ್ರಕರಣ ದಾಖಲಿಸಲಾಗಿದೆ. 2018ರಿಂದ 2019ರ ಆಗಸ್ಟ್‌ವರೆಗೆ₹4.6 ಕೋಟಿ ಸಂಗ್ರಹಿಸಲಾಗಿದೆ’ ಎಂದು ವಿವರಿಸಿದರು.

ಇದಕ್ಕೆ ನ್ಯಾಯಪೀಠ, ನಿಗದಿತ ಮಾದರಿಯಲ್ಲಿ ನಂಬರ್ ಪ್ಲೇಟ್ ಹೊಂದಿರದ ಖಾಸಗಿ ಹಾಗೂ ವಾಣಿಜ್ಯ ವಾಹನಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಕಾನೂನು ಕ್ರಮ ಕೈಗೊಳ್ಳಲು ನಿರ್ದೇಶಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು