ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಹನ ತೆರಿಗೆ ಪಾವತಿ; ಕೊನೆಯ ದಿನಾಂಕ ವಿಸ್ತರಣೆ

Last Updated 2 ಏಪ್ರಿಲ್ 2020, 12:28 IST
ಅಕ್ಷರ ಗಾತ್ರ

ಬೆಳಗಾವಿ: ಮೋಟಾರು ವಾಹನ ತೆರಿಗೆಯನ್ನು ದಂಡ ರಹಿತವಾಗಿ ಪಾವತಿಸಲು ನೀಡಲಾಗಿದ್ದ ಕೊನೆಯ ಅವಧಿಯನ್ನು ಜೂನ್‌ 1ರವರೆಗೆ ವಿಸ್ತರಿಸಲಾಗಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು, ‘ರಾಜ್ಯದ ಎಲ್ಲಾ ನೋಂದಾಯಿತ ವಾಹನಗಳಿಗೆ (ಹೊಸ ವಾಹನಗಳ ನೋಂದಣಿಯನ್ನು ಹೊರತುಪಡಿಸಿ) ಅನ್ವಯಿಸುವಂತೆ 15-04- 2020 ಮತ್ತು 15-05-2020ರ ಒಳಗಾಗಿ ಪಾವತಿಸಬೇಕಾಗಿದ್ದ ಮೋಟಾರು ವಾಹನ ತೆರಿಗೆಯ ಕೊನೆಯ ಅವಧಿಯನ್ನು ವಿಸ್ತರಿಸಲಾಗಿದೆ. ಜನರು ಇದರ ಪ್ರಯೋಜನ ಪಡೆದುಕೊಳ್ಳಬೇಕು’ ಎಂದು ಕೋರಿದ್ದಾರೆ.

‘ಕೋವಿಡ್ 19ರ ಹಿನ್ನೆಲೆಯಲ್ಲಿ ರಾಜ್ಯವನ್ನು ಸಂಪೂರ್ಣವಾಗಿ ಲಾಕ್ ಡೌನ್ ಮಾಡಲಾಗಿದ್ದರಿಂದ ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆ 1957 ರ ಕಲಂ 4(1)ರ ನಿಯಮಗಳನ್ನು ಸಡಿಲಗೊಳಿಸಲಾಗಿದೆ. ಇದೊಂದು ವಿಶೇಷ ಪ್ರಕರಣವೆಂದು ಪರಿಗಣಿಸಿ ಕೊನೆಯ ಅವಧಿಯನ್ನು ವಿಸ್ತರಿಸಲಾಗಿದೆ’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT