ಉಪರಾಷ್ಟ್ರಪತಿ ಇಂದು ಮೈಸೂರಿಗೆ

ಭಾನುವಾರ, ಜೂಲೈ 21, 2019
27 °C

ಉಪರಾಷ್ಟ್ರಪತಿ ಇಂದು ಮೈಸೂರಿಗೆ

Published:
Updated:

ಮೈಸೂರು: ಭಾರತೀಯ ಭಾಷಾ ಸಂಸ್ಥಾನದ (ಸಿಐಐಎಲ್‌) ಸುವರ್ಣ ಮಹೋತ್ಸವದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳಲು, ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಶುಕ್ರವಾರ ಮೈಸೂರಿಗೆ ಆಗಮಿಸಲಿದ್ದಾರೆ.

13ರಂದು ಬೆಳಿಗ್ಗೆ 9 ಗಂಟೆಗೆ ಪ್ರಾದೇಶಿಕ ಶಿಕ್ಷಣ ಸಂಸ್ಥೆಯಲ್ಲಿ (ಆರ್‌ಐಇ) ‘ಡಾ.ಎಸ್‌.ರಾಧಾಕೃಷ್ಣನ್ ಅಡಿಟೋರಿಯಂ’ ಕಟ್ಟಡದ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ.

10 ಗಂಟೆಗೆ, ಸಿಐಐಎಲ್ ಸುವರ್ಣ ಮಹೋತ್ಸವದ ಸಮಾರೋಪದಲ್ಲಿ ಭಾಗಿಯಾಗಲಿದ್ದಾರೆ. ರಾಜ್ಯಪಾಲ ವಜುಭಾಯಿ ವಾಲಾ ಅವರೂ ಈ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !