ವಿಕ್ಟೋರಿಯಾ ಆಸ್ಪತ್ರೆ: ಸಾವಿರ ಬೆಡ್ ಹೆಚ್ಚಳ

ಮಂಗಳವಾರ, ಜೂನ್ 18, 2019
31 °C

ವಿಕ್ಟೋರಿಯಾ ಆಸ್ಪತ್ರೆ: ಸಾವಿರ ಬೆಡ್ ಹೆಚ್ಚಳ

Published:
Updated:

ಬೆಂಗಳೂರು: ನಗರದಲ್ಲಿ ಜನರಿಗೆ ಮತ್ತಷ್ಟು ವೈದ್ಯಕೀಯ ಸೌಕರ್ಯ ಕಲ್ಪಿಸಲು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಒಂದು ಸಾವಿರ ಬೆಡ್ ಹೆಚ್ಚಳ ಮಾಡಲಾಗುತ್ತಿದೆ.

₹68 ಕೋಟಿ ವೆಚ್ಚದಲ್ಲಿ ಹೆಚ್ಚುವರಿ ವಾರ್ಡ್‌ಗಳ ನಿರ್ಮಾಣ ಹಾಗೂ ಇತರ ಸೌಕರ್ಯ ಕಲ್ಪಿಸುವ ಕಾಮಗಾರಿ ಕೈಗೆತ್ತಿಕೊಳ್ಳಲು ಸೋಮವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ಈಗಾಗಲೇ ಟೆಂಡರ್ ಆಹ್ವಾನಿಸಿದ್ದು, ಕಾಮಗಾರಿ ಆರಂಭಿಸಲು ಒಪ್ಪಿಗೆ ನೀಡಲಾಯಿತು ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ಬಡ ಜನರಿಗೆ ಉತ್ತಮ ಗುಣಮಟ್ಟದ ಆರೋಗ್ಯ ಸೌಲಭ್ಯ ಒದಗಿಸುವ ಸಲುವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.

ನೋಟಾ: ನಗರಸಭೆ ಚುನಾವಣೆಯಲ್ಲಿ ‘ನೋಟಾ’ ಚಲಾಯಿಸುವ ಅವಕಾಶ ನೀಡಲು ಸಂಪುಟ ಸಭೆ ಒಪ್ಪಿಗೆ ನೀಡಿದೆ.

ಈವರೆಗೆ ನಗರಸಭೆ ಚುನಾವಣೆಯಲ್ಲಿ ನೋಟಾ ಚಲಾಯಿಸಲು ಅವಕಾಶ ಇರಲಿಲ್ಲ. ಕಾನೂನಿಗೆ ತಿದ್ದುಪಡಿ ತಂದು ನೋಟಾ ಸೇರ್ಪಡೆ ಮಾಡಲಾಗುತ್ತಿದೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 3

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !