ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಣ ಇಲಾಖೆಯೊಂದಿಗೆ ‘ಕ್ರೈಸ್’ ವಿಲೀನ ಇಲ್ಲ

ಈಗಿನ ಗುಣಮಟ್ಟಕ್ಕೆ ಪೆಟ್ಟು ಬೀಳುವ ಆಪಾಯ
Last Updated 4 ಮಾರ್ಚ್ 2020, 18:34 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (ಕ್ರೈಸ್‌) ವತಿಯಿಂದ ನಡೆಯುತ್ತಿರುವ ವಸತಿ ಶಾಲೆಗಳು ಅತ್ಯುತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಿದ್ದು, ಇದನ್ನು ಶಿಕ್ಷಣ ಇಲಾಖೆಯೊಂದಿಗೆ ವಿಲೀನಗೊಳಿಸುವುದಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಗೋವಿಂದ ಎಂ.ಕಾರಜೋಳ ಹೇಳಿದರು.

ವಿಧಾನ ಪರಿಷತ್‌ನಲ್ಲಿ ಬುಧವಾರ ಜೆಡಿಎಸ್‌ನ ಮರಿತಿಬ್ಬೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಕ್ರೈಸ್‌ ಬೋಧಕ/ಬೋಧಕೇತರರಿಗೆ ಸರ್ಕಾರಿ ಶಾಲೆಗಳಲ್ಲಿನ ಬೋಧಕ/ಬೋಧಕೇತರರಿಗೆ ನೀಡುವ ನಿವೃತ್ತಿ ಮತ್ತು ಮರಣ ಉಪದಾನವನ್ನು ಹೊರತುಪಡಿಸಿ ಉಳಿದೆಲ್ಲಾ ಸೌಲಭ್ಯ ನೀಡಲಾಗುತ್ತಿದೆ, ಇನ್ನಷ್ಟು ಸೌಲಭ್ಯ ಒದಗಿಸುವ ಕುರಿತು ಪರಿಶೀಲನೆ ನಡೆಸಲಾಗುವುದು ಎಂದರು.

ಬೋಧಕರ ಪರಿಶ್ರಮದಿಂದಾಗಿ ಕ್ರೈಸ್‌ ಶಾಲೆಗಳಲ್ಲಿ ಇಂತಹ ಉತ್ತಮ ಫಲಿತಾಂಶ ದಾಖಲಾಗುತ್ತಿದೆ. ಇಂತಹ ಉತ್ತಮ ವ್ಯವಸ್ಥೆಯನ್ನು ಹಾಳುಮಾಡಲಾಗದು’ ಎಂದರು.

ಭಾರಿ ಖಾಲಿ ಹುದ್ದೆ: ‘ರಾಜ್ಯದಲ್ಲಿ ಕ್ರೈಸ್‌ನ 824 ವಸತಿ ಶಾಲೆಗಳಿವೆ. ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಗಳಲ್ಲಿ360 ಬೋಧಕ ಹುದ್ದೆಗಳ ಪೈಕಿ 209 ಖಾಲಿ ಇದೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಶಾಲೆಗಳಲ್ಲಿ 500ರಲ್ಲಿ 350 ಹುದ್ದೆಗಳು ಖಾಲಿ ಇವೆ, ಕ್ರೈಸ್‌ ವಸತಿ ಶಾಲೆಗಳಲ್ಲಿ 8,823 ಬೋಧಕರ ಪೈಕಿ 5,044 ಹುದ್ದೆಗಳು ಖಾಲಿ ಇವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT