ಮಂಗಳವಾರ, ನವೆಂಬರ್ 12, 2019
28 °C

ಮಲ್ಯ ಅರ್ಜಿ ವಜಾ

Published:
Updated:

ಬೆಂಗಳೂರು: ‘ಬ್ಯಾಂಕುಗಳಿಗೆ ಸಾಲ ತೀರಿಸುವ ಪ್ರಕರಣಕ್ಕೆ ಸಂಬಂಧಿಸಿದಂತೆ ₹ 3,101 ಕೋಟಿ ಠೇವಣಿ ಇರಿಸಬೇಕು’ ಎಂಬ ಸಾಲ ವಸೂಲಾತಿ ಮೇಲ್ಮನವಿ ನ್ಯಾಯಮಂಡಳಿ (ಡಿಆರ್‌ಎಟಿ) ಆದೇಶದ ಸಂಬಂಧ ವಿಜಯ್‌ ಮಲ್ಯ ಸಲ್ಲಿಸಿದ್ದ ಮರು ಪರಿಶೀಲನಾ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ, ‘2018ರ ಅ.5ರಂದು ಹೈಕೋರ್ಟ್ ಹೊರಡಿಸಿದ ಆದೇಶದಲ್ಲಿ ಮಧ್ಯಪ್ರವೇಶ ಮಾಡಲು ಸಕಾರಣಗಳು ಕಂಡುಬಂದಿಲ್ಲ’ ಎಂದು ಅಭಿಪ್ರಾಯಪಟ್ಟಿದೆ.

ಪ್ರತಿಕ್ರಿಯಿಸಿ (+)