ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ: ಮಹಿಳೆಗೆ ಕೋವಿಡ್‌–19 ದೃಢ

ಮಹಾರಾಷ್ಟ್ರ ಸಂಪರ್ಕದಿಂದ ಸೋಂಕು ತಗುಲಿರುವ ಶಂಕೆ
Last Updated 12 ಏಪ್ರಿಲ್ 2020, 12:01 IST
ಅಕ್ಷರ ಗಾತ್ರ

ವಿಜಯಪುರ: ನಗರದ ಚಪ್ಪರಬಂದ್‌ ಪ್ರದೇಶದ 60 ವರ್ಷ ವಯಸ್ಸಿನ ಮಹಿಳೆಯೊಬ್ಬರಿಗೆ ಕೋವಿಡ್‌–19 ದೃಢಪಟ್ಟಿದೆ.

ಮಹಿಳೆಗೆ ಸೋಂಕು ಮಹಾರಾಷ್ಟ್ರ ಸಂಪರ್ಕದಿಂದ ತಗುಲಿರಬಹುದು ಎಂಬ ಶಂಕೆಯಿದ್ದು, ಈ ಕುರಿತು ಪೊಲೀಸ್ ಮತ್ತು ಆರೋಗ್ಯ ಇಲಾಖೆಯಿಂದ ತನಿಖೆ ಕೈಗೊಳ್ಳಲಾಗಿದೆ ಎಂದು ಎಂದು ಜಿಲ್ಲಾಧಿಕಾರಿ ವೈ.ಎಸ್‌.ಪಾಟೀಲ ತಿಳಿಸಿದ್ದಾರೆ.

ರಕ್ತದೊತ್ತಡ, ಸಕ್ಕರೆ ಕಾಯಿಲೆ ಇರುವ ಈ ಮಹಿಳೆ (ರೋಗಿ ಸಂಖ್ಯೆ 221) ಸದ್ಯ ತೀವ್ರ ಉಸಿರಾಟ ತೊಂದರೆ ಅನುಭವಿಸುತ್ತಿದ್ದು, ಕೋವಿಡ್‌–19 ಆಸ್ಪತ್ರೆಯಾಗಿ ಬದಲಾಯಿಸಲಾಗಿರುವ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಹೇಳಿದರು.

ಗೋಲಗುಂಬಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಪ್ರದೇಶವನ್ನು ಸಂಪೂರ್ಣ ಸೀಲ್‍ಡೌನ್ ಮಾಡಲಾಗಿದೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT