ಲೋಕಸಭೆ ಚುನಾವಣೆಯಲ್ಲಿ ವಿಜಯೇಂದ್ರ ಸ್ಪರ್ಧಿಸುವುದಿಲ್ಲ: ಯಡಿಯೂರಪ್ಪ

7

ಲೋಕಸಭೆ ಚುನಾವಣೆಯಲ್ಲಿ ವಿಜಯೇಂದ್ರ ಸ್ಪರ್ಧಿಸುವುದಿಲ್ಲ: ಯಡಿಯೂರಪ್ಪ

Published:
Updated:

ಯಲ್ಲಾಪುರ (ಉತ್ತರ ಕನ್ನಡ): ‘ನನ್ನ ಪುತ್ರ ವಿಜಯೇಂದ್ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಹಾಲಿ ಸಂಸದರಿಗೆ ಟಿಕೆಟ್ ತಪ್ಪಿಸುವ ಯಾವುದೇ ಮಾತೂ ಪಕ್ಷದೊಳಗಿಲ್ಲ’ ಎಂದು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದರು. 

ಪಟ್ಟಣದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದಿಂದ ಸ್ಪರ್ಧಿಸುತ್ತಾರೆಂಬ ವದಂತಿ ಇದೆ. ಆದರೆ, ಅವರು ಇಲ್ಲಿ ಸ್ಪರ್ಧಿಸುವ ವಿಚಾರ ಹೊಂದಿಲ್ಲ. ಅವರು ದೇಶದಲ್ಲಿ ಯಾವ ಕ್ಷೇತ್ರದಲ್ಲಿ ಸ್ಪರ್ಧಿಸಿದರೂ ಮತದಾರರು ಗೆಲ್ಲಿಸುತ್ತಾರೆ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ತಮ್ಮ ಕ್ಷೇತ್ರದಲ್ಲೇ ಗೆಲ್ಲುವ ವಿಶ್ವಾಸವಿಲ್ಲ. ಹಾಗಾಗಿ ಕರ್ನಾಟಕದತ್ತ ಮುಖ ಮಾಡುತ್ತಿದ್ದಾರೆ’ ಎಂದು ಟೀಕಿಸಿದರು.

‘ರಾಜ್ಯದಲ್ಲಿ 37 ಶಾಸಕರ ಬಲದ ಪಕ್ಷ ಅಧಿಕಾರಕ್ಕೆ ಬಂದಿದೆ. 104 ಶಾಸಕರನ್ನು ಹೊಂದಿರುವ ಪಕ್ಷ ವಿರೋಧ ಪಕ್ಷದಲ್ಲಿ ಕುಳಿತಿರುವುದು ವಿಪರ್ಯಾಸ. ಸರ್ಕಾರ ರಚನೆಯಾಗಿ ಮೂರು ತಿಂಗಳು ಕಳೆದರೂ ಕೆಲವು ಜಿಲ್ಲೆಗಳಲ್ಲಿ ಉಸ್ತುವಾರಿ ಸಚಿವರು ಅಧಿಕಾರ ವಹಿಸಿಕೊಂಡಿಲ್ಲ. ಶಾಸಕರ ಅನುದಾನ ಬಿಡುಗಡೆ ಆಗುತ್ತಿಲ್ಲ’ ಎಂದು ದೂರಿದರು.

‘ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ರೈತರ ₹ 2 ಲಕ್ಷದವರೆಗಿನ ಸಾಲಮನ್ನಾ ಮಾಡುವುದಾಗಿ ಹೇಳುತ್ತಿದ್ದಾರೆ. ಆದರೆ, ಹಣ ಎಲ್ಲಿಂದ ಹೊಂದಾಣಿಕೆ ಮಾಡುತ್ತಾರೆ ಎಂದು ತಿಳಿದಿಲ್ಲ’ ಎಂದರು.

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 2

  Angry

Comments:

0 comments

Write the first review for this !