ಭಾನುವಾರ, 28 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಮ ವಾಸ್ತವ್ಯ| ರಾಯಚೂರಿಗೆ ಬಂದಿಳಿದ ಸಿಎಂ, ಕಾರ್ಮಿಕ ಹೋರಾಟ ಬಿಸಿ ತಟ್ಟುವುದೇ?

Last Updated 26 ಜೂನ್ 2019, 3:22 IST
ಅಕ್ಷರ ಗಾತ್ರ

ರಾಯಚೂರು: ಜಿಲ್ಲೆಯ ಮಾನ್ವಿ ತಾಲ್ಲೂಕಿನ ಕರೇಗುಡ್ಡದಲ್ಲಿ ಗ್ರಾಮ ವಾಸ್ತವ್ಯ ಮಾಡುವುದಕ್ಕಾಗಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಉದ್ಯಾನ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿಬುಧವಾರ ಬೆಳಿಗ್ಗೆ 6ಕ್ಕೆ ರಾಯಚೂರು ನಗರಕ್ಕೆ‌ ಬಂದಿಳಿದರು.

ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಾವ್ನಾಡಗೌಡ, ಜಿಲ್ಲಾಧಿಕಾರಿ ಶರತ್ ಬಿ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ವೇದಮೂರ್ತಿ ಅವರು ಪುಷ್ಪಗುಚ್ಚ ನೀಡಿ ಸ್ವಾಗತಿಸಿದರು.

ರೈಲುನಿಲ್ದಾಣದಿಂದ ಪ್ರವಾಸಿ ಮಂದಿರಕ್ಕೆ ತೆರಳಿದ್ದಾರೆ.

ಕಾರ್ಮಿಕರ ಹೋರಾಟದ ಬಿಸಿ ತಟ್ಟುವುದೇ?

ಕರೇಗುಡ್ಡದಲ್ಲಿ ಹೋರಾಟ ನಡೆಸಲು ಉದ್ದೇಶಿಸಿದ್ದ ವಿವಿಧ ಕಾರ್ಮಿಕ ಸಂಘಗಳ ಮುಖಂಡರನ್ನು ಮಾತುಕತೆಗಾಗಿ ಪ್ರವಾಸಿ ಮಂದಿರಕ್ಕೆ ಬೆಳಿಗ್ಗೆ 7.30ಕ್ಕೆ ಬರುವಂತೆ ಸಮಯಾವಕಾಶ ನೀಡಿದ್ದಾರೆ.

ತುಂಗಭದ್ರಾ ಎಡದಂಡೆ ಕಾಲುವೆ ಹಂಗಾಮಿ ಕಾರ್ಮಿಕರು, ಯರಮರಸ್ ಶಾಖೋತ್ಪನ್ನ ವಿದ್ಯುತ್ ಸ್ಥಾವರದ ಹಂಗಾಮಿ ಕಾರ್ಮಿಕರು ಹಾಗೂ ರಾಯಚೂರು ‌ವಿಶ್ವವಿದ್ಯಾಲಯ ಹೋರಾಟ ಸಮಿತಿ ಮುಖಂಡರೊಂದಿಗೆ ಚರ್ಚಿಸಲಿದ್ದಾರೆ.

ಮುಖ್ಯಮಂತ್ರಿ ಗ್ರಾಮ ವಾಸ್ತವ್ಯ ವೇಳಾಪಟ್ಟಿ
ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಜೂನ್ 26ರಂದು ಮಾನ್ವಿ ತಾಲ್ಲೂಕಿನ ಕರೇಗುಡ್ಡ ಗ್ರಾಮದಲ್ಲಿ ವಾಸ್ತವ್ಯ ಹೂಡುವರು.

ಬೆಳಿಗ್ಗೆ 9 ಗಂಟೆಗೆ ರಾಯಚೂರಿನಿಂದ ಕರೇಗುಡ್ಡ ಗ್ರಾಮಕ್ಕೆ ಸರ್ಕಾರಿ ಬಸ್‌ನಲ್ಲಿಆಗಮಿಸುವರು. ಗ್ರಾಮದಲ್ಲಿ ಹಮ್ಮಿಕೊಂಡಿರುವ ಜನತಾದರ್ಶನ ಕಾರ್ಯಕ್ರಮದಲ್ಲಿ ಬೆಳಿಗ್ಗೆ 10ರಿಂದ ಸಂಜೆ 6ರ ಗಂಟೆಯವರೆಗೆ ಸಾರ್ವಜನಿಕರ ಮನವಿ ಹಾಗೂ ಕುಂದು ಕೊರತೆಗಳನ್ನು ಆಲಿಸುವರು.

<em><strong>ರಾಯಚೂರಿನ ಪ್ರವಾಸಿ ಮಂದಿರದಿಂದ ಕರೇಗುಡ್ಡಕ್ಕೆ ಮುಖ್ಯಮಂತ್ರಿಯನ್ನು ಕರೆದುಕೊಂಡು ಹೋಗಲು ಸಜ್ಜಾದ ಸರ್ಕಾರಿ ಬಸ್</strong></em>
ರಾಯಚೂರಿನ ಪ್ರವಾಸಿ ಮಂದಿರದಿಂದ ಕರೇಗುಡ್ಡಕ್ಕೆ ಮುಖ್ಯಮಂತ್ರಿಯನ್ನು ಕರೆದುಕೊಂಡು ಹೋಗಲು ಸಜ್ಜಾದ ಸರ್ಕಾರಿ ಬಸ್

ಸಂಜೆ 6.30 ರಿಂದ 8.30 ಗಂಟೆವರೆಗೆ ರೈತರಿಗೆ ಮಾಹಿತಿ, ಸ್ಥಳೀಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ. ಆನಂತರಶಾಲಾ ಶಿಕ್ಷಕರು ಹಾಗೂ ಮಕ್ಕಳೊಂದಿಗೆ ಭೋಜನ ಮಾಡಿ, ರಾತ್ರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಾಸ್ತವ್ಯ ಮಾಡುವರು.

ಜೂನ್ 27ರಂದು ಬೆಳಿಗ್ಗೆ 5 ಗಂಟೆಗೆ ಕರೇಗುಡ್ಡ ಗ್ರಾಮದಿಂದ ರಸ್ತೆಯ ಮೂಲಕ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲ್ಲೂಕಿನ ಉಜಿಳಾಂಬ ಗ್ರಾಮಕ್ಕೆ ತೆರಳುವರು ಎಂದು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎನ್.ಕೃಷ್ಣಯ್ಯ ತಿಳಿಸಿದ್ದಾರೆ.

<em><strong>ರಾಯಚೂರಿನ ಅಧಿಕಾರಿಗಳು, ಜನಪ್ರತಿಗಳೊಂದಿಗೆ ಸಿಎಂ ಚರ್ಚೆ</strong></em>
ರಾಯಚೂರಿನ ಅಧಿಕಾರಿಗಳು, ಜನಪ್ರತಿಗಳೊಂದಿಗೆ ಸಿಎಂ ಚರ್ಚೆ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT