ಗುರುವಾರ , ಸೆಪ್ಟೆಂಬರ್ 19, 2019
21 °C

ವಿಶ್ವನಾಥಗೆ ಚಮಚಾಗಿರಿ ಮಾಡಿ ಅಭ್ಯಾಸ: ಜಮೀರ್

Published:
Updated:

ಹುಬ್ಬಳ್ಳಿ: ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್‌.ವಿಶ್ವನಾಥ ಅವರಿಗೆ ಚಮಚಾಗಿರಿ ಮಾಡಿ ಅಭ್ಯಾಸವಿದೆ ಎಂದು ಸಚಿವ ಜಮೀರ್‌ ಅಹ್ಮದ್ ತಿರುಗೇಟು ನೀಡಿದರು.

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಲಿ ಎಂದು ಕೆಲವರು ಚಮಚಾಗಿರಿ ಮಾಡುತ್ತಿದ್ದಾರೆ ಎಂದು ವಿಶ್ವನಾಥ ಹೇಳಿದ್ದಾರಲ್ಲ ಎಂಬ ಮಾಧ್ಯಮದವರ ಪ್ರಶ್ನೆಗೆ, ಎಸ್‌.ಎಂ. ಕೃಷ್ಣ ಅವರ ಸರ್ಕಾರದಲ್ಲಿ ಅವರು ಚಮಚಾಗಿರಿಯನ್ನೇ ಮಾಡಿಕೊಂಡಿದ್ದರು ಎಂದು ಟೀಕಿಸಿದರು.

‘ಮೇ 23 ರಿಂದ 25 ರೊಳಗೆ ರಾಜ್ಯದಲ್ಲಿ ಬಿ.ಎಸ್‌. ಯಡಿಯೂರಪ್ಪ ಅವರು ಸರ್ಕಾರ ರಚಿಸಿದರೆ, ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ. ಬಿಎಸ್‌ವೈ ಮನೆ ಮುಂದೆ ಕಾವಲುಗಾರ ಆಗುತ್ತೇನೆ’ ಎಂದರು.

 

Post Comments (+)