ಶುಕ್ರವಾರ, ನವೆಂಬರ್ 15, 2019
21 °C
ವಿಶ್ವಕರ್ಮ ಜಯಂತಿಯಲ್ಲಿ ಡಿಸಿಎಂ ಅಶ್ವತ್ಥನಾರಾಯಣ ಹೇಳಿಕೆ

ಕೋಲಾರದಲ್ಲಿ ಜಕಣಾಚಾರಿ ಶಿಲ್ಪಕಲಾ ಕೇಂದ್ರ

Published:
Updated:
Prajavani

ಬೆಂಗಳೂರು: ಕೋಲಾರದ ಬಳಿ ₹ 10 ಕೋಟಿ ವೆಚ್ಚದಲ್ಲಿ ಅಮರ‌ಶಿಲ್ಪಿ ಜಕಣಾಚಾರಿ ಶಿಲ್ಪಕಲಾ ಕೇಂದ್ರ ಸ್ಥಾಪಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಉಪಮುಖ್ಯಮಂತ್ರಿ ಡಾ. ಸಿ. ಎನ್‌. ಅಶ್ವತ್ಥನಾರಾಯಣ ಹೇಳಿದರು.

ಮಂಗಳವಾರ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಆಯೋಜಿಸಿದ್ದ ವಿಶ್ವಕರ್ಮ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೌಶಲಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ ಈ ಕೇಂದ್ರ ಸ್ಥಾಪಿಸಲಾಗುತ್ತಿದೆ ಎಂದರು.

ವಿಧಾನ ಪರಿಷತ್ ಸದಸ್ಯ ಕೆ. ಪಿ. ನಂಜುಂಡಿ ಮಾತನಾಡಿ, 45 ಲಕ್ಷ ಜನಸಂಖ್ಯೆ ಇರುವ ವಿಶ್ವಕರ್ಮ ಸಮುದಾಯವನ್ನು ಕಡೆಗಣಿಸಬಾರದು, ಸಚಿವ ಸ್ಥಾನ ನೀಡುವ ಮೂಲಕ ಸಮುದಾಯದ ಹಕ್ಕನ್ನು ರಕ್ಷಿಸಬೇಕು ಎಂದು ಒತ್ತಾಯಿಸಿದರು.

‘ಜನವರಿ 1ರಂದು ನಡೆಸುವ ಜಕಣಾಚಾರಿ ಜಯಂತಿಯನ್ನು ಸರ್ಕಾರವೇ ನಡೆಸಬೇಕು, ಬೇಲೂರಿನ ಚನ್ನಕೇಶವ ದೇವಸ್ಥಾನದ ಆವರಣದಲ್ಲಿ ಜಕಣಾಚಾರಿ ಪ್ರತಿಮೆ ಸ್ಥಾಪಿಸಬೇಕು, ರಾಜ್ಯದ ಯಾವುದಾದರೊಂದು ವಿಶ್ವವಿದ್ಯಾಲಯಕ್ಕೆ ಜಕಣಾಚಾರಿ ಹೆಸರು ಇಡಬೇಕು, ವಿಶ್ವಕರ್ಮ ಅಭಿವೃದ್ಧಿ ನಿಗಮಕ್ಕೆ ಕನಿಷ್ಠ ₹ 200 ಕೋಟಿ ಅನುದಾನ ನೀಡಬೇಕು’ ಎಂಬ ಬೇಡಿಕೆ ಸಲ್ಲಿಸಿದರು.

ವಿಶ್ವಕರ್ಮ ಸ್ವಾಮೀಜಿಗಳ ಒಕ್ಕೂಟದ ಅಧ್ಯಕ್ಷ ಶಹಾಪುರದ ಕಾಳಹಸ್ತೇಂದ್ರ ಸ್ವಾಮೀಜಿ ಮಾತನಾಡಿ, ದೇವರಾಜ ಅರಸು ಸರ್ಕಾರದಲ್ಲಿ ಮಾತ್ರ ಬಿ. ಬಿ. ಪತ್ತಾರ್‌ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ. ಉಳಿದಂತೆ ಯಾರೂ ವಿಶ್ವಕರ್ಮ ಸಮುದಾಯವನ್ನು ಗುರುತಿಸಿಲ್ಲ ಎಂದರು.

ಪ್ರತಿಕ್ರಿಯಿಸಿ (+)