ಬಾಲಕಿ ಮೇಲೆ ಐವರ ನಿರಂತರ ಅತ್ಯಾಚಾರ: ಗರ್ಭಿಣಿಯಾದ ಬಳಿಕ ಪ್ರಕರಣ ಬಯಲಿಗೆ

ಮಂಗಳವಾರ, ಜೂಲೈ 23, 2019
27 °C
ದಕ್ಷಿಣ ಕನ್ನಡದಲ್ಲಿ ಮತ್ತೊಂದು ಅತ್ಯಾಚಾರ

ಬಾಲಕಿ ಮೇಲೆ ಐವರ ನಿರಂತರ ಅತ್ಯಾಚಾರ: ಗರ್ಭಿಣಿಯಾದ ಬಳಿಕ ಪ್ರಕರಣ ಬಯಲಿಗೆ

Published:
Updated:

ವಿಟ್ಲ (ದಕ್ಷಿಣ ಕನ್ನಡ): ದಕ್ಷಿಣ ಕನ್ನಡ ಜಿಲ್ಲೆ ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಾಲಕಿಯೊಬ್ಬಳ ಮೇಲೆ ಐವರು ಬೇರೆ ಬೇರೆ ಸಮಯಗಳಲ್ಲಿ ಅತ್ಯಾಚಾರ ನಡೆಸಿದ್ದು, ಆಕೆ ಆರು ತಿಂಗಳ ಗರ್ಭಿಣಿಯಾದ ಬಳಿಕ ಪ್ರಕರಣ ಬಯಲಿಗೆ ಬಂದಿದೆ.. 

ವಿಟ್ಲ ನಿವಾಸಿಯಾಗಿರುವ 17 ವರ್ಷದ ಬಾಲಕಿ ಮೇಲೆ ಈ ಕೃತ್ಯ ನಡೆದಿದೆ. ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಗ್ರಾಮ ಪಂಚಾಯಿತಿ ಸಿಬ್ಬಂದಿ ಸೇರಿದಂತೆ ಐವರು ಈಕೆಯ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಸುತ್ತಿದ್ದರು. ಈ ಬಗ್ಗೆ ಯಾರಿಗೂ ಹೇಳದಂತೆ ಐವರೂ ಬೆದರಿಕೆ ಹಾಕಿದ್ದರು. ಆದರೆ, ಆಶಾ ಕಾರ್ಯಕರ್ತೆಯೊಬ್ಬರು ಬಾಲಕಿ ಗರ್ಭಿಣಿಯಾಗಿರುವುದನ್ನು ಮನಗಂಡು, ಬಾಲಕಿಯ ವಿಚಾರಣೆ ಮಾಡಿ ಪ್ರಕರಣ ಬಯಲಿಗೆಳೆದಿದ್ದಾರೆ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲಿಸರು ತನಿಖೆ ಕೈಗೊಂಡಿದ್ದಾರೆ. 

ಬರಹ ಇಷ್ಟವಾಯಿತೆ?

 • 6

  Happy
 • 2

  Amused
 • 4

  Sad
 • 3

  Frustrated
 • 42

  Angry

Comments:

0 comments

Write the first review for this !