ಶುಕ್ರವಾರ, ಫೆಬ್ರವರಿ 28, 2020
19 °C

ಕೋಳ್ಯೂರು ರಾಮಚಂದ್ರ ರಾವ್‌ಗೆ ‘ಪಿ.ವಿ.ಹಾಸ್ಯಗಾರ’ ಪ್ರಶಸ್ತಿ ಘೋಷಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Deccan Herald

ಹೊನ್ನಾವರ: ಯಕ್ಷಗಾನದ ಪ್ರಸಿದ್ಧ ಸ್ತ್ರೀ ವೇಷಧಾರಿ, ಕಾಸರಗೋಡಿನ ಕೋಳ್ಯೂರು ರಾಮಚಂದ್ರ ರಾವ್ ಅವರಿಗೆ ಪ್ರಸಕ್ತ ಸಾಲಿನ ‘ಪಿ.ವಿ.ಹಾಸ್ಯಗಾರ ಕರ್ಕಿ’ ಪ್ರಶಸ್ತಿ ಪ್ರಕಟಿಸಲಾಗಿದೆ. 

ಈ ಕುರಿತಂತೆ ಪಿ.ವಿ.ಹಾಸ್ಯಗಾರ ಅವರ ಪುತ್ರ, ಪ್ರಸ್ತುತ ಅಮೆರಿಕದಲ್ಲಿ ನೆಲೆಸಿರುವ ಆನಂದ ಹಾಸ್ಯಗಾರ ಪ್ರಕಟಣೆ ನೀಡಿದ್ದಾರೆ. ಪ್ರಶಸ್ತಿಯು ₹ 50 ಸಾವಿರ ನಗದು, ಶಾಲು, ಸ್ಮರಣಿಕೆ ಹಾಗೂ ಇತರ ಗೌರವಗಳನ್ನು ಒಳಗೊಂಡಿದೆ. ನವೆಂಬರ್ 18ರಂದು ಕರ್ಕಿ ನಾಕಾದ ಹವ್ಯಕ ಸಭಾಭವನದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)