ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಟಿಯು ವಿಭಜಿಸಲು ಕೋಲಾರ, ಚಿಕ್ಕಬಳ್ಳಾಪುರ ಜನಪ್ರತಿನಿಧಿಗಳ ಒತ್ತಡ?

Last Updated 10 ಫೆಬ್ರುವರಿ 2019, 14:22 IST
ಅಕ್ಷರ ಗಾತ್ರ

ಬೆಳಗಾವಿ: ಬೆಳಗಾವಿಯಲ್ಲಿರುವ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವನ್ನು ವಿಭಜಿಸಿ, ಮುದ್ದೇನಹಳ್ಳಿಯಲ್ಲಿ ಸ್ಥಾಪಿಸಬೇಕೆಂದು ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಯ ಜನಪ್ರತಿನಿಧಿಗಳು ಕಳೆದ ವರ್ಷ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು ಬಹಿರಂಗಗೊಂಡಿದೆ.

ಕೋಲಾರ, ಚಿಂತಾಮಣಿ, ಶಿಢ್ಲಘಟ್ಟ, ಚಿಕ್ಕಬಳ್ಳಾಪುರ, ಬಾಗೇಪಲ್ಲಿ, ಮಾಲೂರು, ಬಂಗಾರಪೇಟೆ, ಮುಳಬಾಗಿಲು ಕ್ಷೇತ್ರದ ಶಾಸಕರು, ವಿಧಾನ ಪರಿಷತ್‌ ಸದಸ್ಯ ಚೌಡರೆಡ್ಡಿ, ಕೃಷಿ ಸಚಿವ ಎನ್‌.ಎಚ್‌ ಶಿವಶಂಕರರೆಡ್ಡಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರನ್ನೊಳಗೊಂಡ ನಿಯೋಗವು ಕಳೆದ ನವೆಂಬರ್‌ 26ರಂದು ಉನ್ನತ ಶಿಕ್ಷಣ ಇಲಾಖೆಗೆ ಮನವಿ ಸಲ್ಲಿಸಿತ್ತು.

‘ತಾಂತ್ರಿಕ ಶಿಕ್ಷಣದ ಗುಣಮಟ್ಟದ ದೃಷ್ಟಿಯಿಂದ, ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ಆಡಳಿತಾತ್ಮಕ ದೃಷ್ಟಿಯಿಂದ ವಿಟಿಯು ಅನ್ನು ವಿಭಜಿಸಬೇಕು. ಪ್ರೊ.ಯಶಪಾಲ್‌ ವರದಿಯೂ ಕೂಡ ಶಿಫಾರಸ್ಸು ಮಾಡಿದೆ. ಬೆಂಗಳೂರು ವಿಶ್ವವಿದ್ಯಾಲಯ ವಿಭಜಿಸಿದ ರೀತಿಯಲ್ಲಿ ವಿಟಿಯು ವಿಭಜಿಸಿ, ಸರ್‌.ಎಂ. ವಿಶ್ವೇಶ್ವರಯ್ಯ ಅವರ ಹುಟ್ಟೂರಾದ ಮುದ್ದೇನಹಳ್ಳಿಯಲ್ಲಿ ಸ್ಥಾಪಿಸಬೇಕು’ ಎಂದು ಕೋರಿಕೊಂಡಿದ್ದರು.

ಶಾಸಕರ ಬೇಡಿಕೆ ಕುರಿತು ಅಭಿಪ್ರಾಯ ತಿಳಿಸುವಂತೆ ವಿಟಿಯು ಕುಲಪತಿ ಹಾಗೂ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್‌ನ ಕಾರ್ಯನಿರ್ವಾಹಕ ನಿರ್ದೇಶಕರಿಗೆ ಉನ್ನತ ಶಿಕ್ಷಣ ಇಲಾಖೆಯು ಡಿಸೆಂಬರ್‌ 13ರಂದು ಸೂಚನೆ ನೀಡಿತ್ತು.

ಕ್ರಮಕೈಗೊಳ್ಳದಂತೆ ಸೂಚನೆ:14 ದಿನಗಳ ನಂತರ ಪುನಃ ಉನ್ನತ ಶಿಕ್ಷಣ ಇಲಾಖೆಯು ಪತ್ರ ಬರೆದು, ‘ಸರ್ಕಾರದ ಮುಂದಿನ ನಿರ್ದೇಶನ ಬರುವವರೆಗೆ ಯಾವುದೇ ಪ್ರಕ್ರಿಯೆ ಕೈಗೊಳ್ಳಬಾರದು’ ಎಂದು ಸೂಚಿಸಿತು.

ಇಲಾಖೆಯ ಇವೆರಡೂ ಪತ್ರಗಳು ಸಾಮಾಜಿಕ ತಾಣಗಳಲ್ಲಿ ವೈರಲ್‌ ಆಗಿವೆ. ನಿಯೋಗದಲ್ಲಿದ್ದ ಶಾಸಕರು, ಸಚಿವರ ವಿರುದ್ಧ ಉತ್ತರ ಕರ್ನಾಟಕದ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಶ್ವವಿದ್ಯಾಲಯವನ್ನು ಹಾಸನದಲ್ಲಿ ಸ್ಥಾಪಿಸಲು ತೀರ್ಮಾನಿಸಿರುವ ಸರ್ಕಾರದ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT