ಶನಿವಾರ, ಜನವರಿ 25, 2020
22 °C

’ಅವಕಾಶ ಸಿಕ್ಕರೆ ನಾನೂ ಮುಖ್ಯಮಂತ್ರಿಯಾಗುವೆ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ‘ಅವಕಾಶ ಸಿಕ್ಕರೆ ಮುಖ್ಯಮಂತ್ರಿಯಾಗಲು ಸಿದ್ಧವಿದ್ದೇನೆ’ ಎಂದು ವಿಧಾನ ಪರಿಷತ್ ವಿರೋಧಪಕ್ಷದ ನಾಯಕ ಎಸ್.ಆರ್. ಪಾಟೀಲ ತಿಳಿಸಿದರು.

ಭಾನುವಾರ ಇಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ರಾಜ್ಯದ 15 ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ 12 ಕ್ಷೇತ್ರದಲ್ಲಿ ಗೆಲುವು ಸಾಧಿಸಲಿದೆ. ಕಾಂಗ್ರೆಸ್‌ ಪಕ್ಷಕ್ಕೆ ದ್ರೋಹ ಮಾಡಿ ಹೋದ ಅನರ್ಹ ಶಾಸಕರಿಗೆ ಮತದಾರರು ತಕ್ಕ ಪಾಠ  ಕಲಿಸಲಿದ್ದಾರೆ. ಕಾಂಗ್ರೆಸ್ ಹಾಗೂ ಬಿಜೆಪಿ ಮತಗಳು ಅನರ್ಹರಿಗೆ ಸಿಕ್ಕಿರುವುದಿಲ್ಲ’ ಎಂದರು.

‘ಉಪ ಚುನಾವಣೆ ಫಲಿತಾಂಶದ ಬಳಿಕ ಬಿಜೆಪಿ ಸರ್ಕಾರ ಬೀಳಲಿದೆ. ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದವರು ಮುಖ್ಯಮಂತ್ರಿ ಆಗಲಿದ್ದಾರೆ. ನಾನೂ ಸಿದ್ಧವಿದ್ದೇನೆ’ ಎಂದು ಪ್ರತಿಕ್ರಿಯಿಸಿದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು