ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

67 ಸಾವಿರ ಕ್ಯೂಸೆಕ್ ನೀರು ನದಿಗೆ

Last Updated 28 ಜುಲೈ 2019, 17:46 IST
ಅಕ್ಷರ ಗಾತ್ರ

ಹುಣಸಗಿ: ‘ತಾಲ್ಲೂಕಿನ ನಾರಾಯಣಪುರ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಹರಿ ಬಿಡಲಾಗಿದೆ’ ಎಂದು ಡ್ಯಾಂ ಡಿವಿಜನ್ ಅಧಿಕಾರಿಗಳು ತಿಳಿಸಿದ್ದಾರೆ.

‘ಈ ಮಳೆಗಾಲದಲ್ಲಿ ಇದೇ ಮೊದಲ ಬಾರಿಗೆ ಜಲಾಶಯದ ಕ್ರಸ್ಟ್‌ಗೇಟ್‌ಗಳ ಮುಖಾಂತರ ನೀರನ್ನು ಕೃಷ್ಣಾ ನದಿಗೆ ಹರಿಸಲಾಗುತ್ತಿದೆ. ಭಾನುವಾರ ಸಂಜೆ 7ರ ಸುಮಾರಿಗೆ ಬಸವಸಾಗರ ಜಲಾಶಯಕ್ಕೆ 1 ಲಕ್ಷ ಕ್ಯೂಸೆಕ್ ನೀರು ಒಳಹರಿವು ದಾಖಲಾಗಿದೆ. 12 ಗೇಟ್‌ಗಳ ಮುಖಾಂತರ 97,800 ಕ್ಯೂಸೆಕ್ ನೀರನ್ನು ನದಿಗೆ ಹರಿಸಲಾಗುತ್ತಿದೆ’ ಎಂದು ಡ್ಯಾಂ ಡಿವಿಜನ್ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಆರ್.ಎಲ್.ಹಳ್ಳೂರ ‘ಪ್ರಜಾವಾಣಿ’ಗೆ ತಿಳಿಸಿದರು.

‘ಜಲಾಶಯದ ಗರಿಷ್ಠ ಮಟ್ಟ 492.252 ಮೀಟರ್ ಕಾಯ್ದುಕೊಂಡು ಹೆಚ್ಚಿನ ಪ್ರಮಾಣದ ನೀರನ್ನು ನದಿಗೆ ಹರಿಸಲಾಗುತ್ತಿದೆ. ಕೃಷ್ಣಾ ನದಿಯ ದಂಡೆಯಲ್ಲಿರುವ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಬೇಕು’ ಎಂದು ಅಧಿಕಾರಿಗಳು ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT