ಉಜನಿಯಿಂದ ನೀರು ಬಿಡಿಸಲು ಕ್ರಮ: ಸಿಎಂ

ಶುಕ್ರವಾರ, ಮೇ 24, 2019
23 °C

ಉಜನಿಯಿಂದ ನೀರು ಬಿಡಿಸಲು ಕ್ರಮ: ಸಿಎಂ

Published:
Updated:
Prajavani

ಅಫಜಲಪುರ (ಕಲಬುರ್ಗಿ ಜಿಲ್ಲೆ): ‘ಬತ್ತಿರುವ ಭೀಮಾ ನದಿಗೆ ಮಹಾರಾಷ್ಟ್ರ ಸರ್ಕಾರದೊಂದಿಗೆ ಚರ್ಚಿಸಿ ಉಜನಿ ಜಲಾಶಯದಿಂದ ನೀರು ಬಿಡಿಸಿಕೊಳ್ಳುತ್ತೇವೆ’ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಭರವಸೆ ನೀಡಿದರು.

ತಾಲ್ಲೂಕಿನ ದೇವಲಗಾಣಗಾಪುರದಲ್ಲಿ ಮಂಗಳವಾರ ವಿವಿಧ ಸಂಘ–ಸಂಸ್ಥೆಗಳವರಿಂದ ಮನವಿ ಸ್ವೀಕರಿಸಿ ಅವರು ಮಾತನಾಡಿದರು. 

‘ವಿಜಯಪುರ, ಕಲಬುರ್ಗಿ ಮತ್ತು ಬೀದರ್‌ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವುದನ್ನು ಅರಿತುಕೊಂಡಿದ್ದೇನೆ. ನೀರಿನ ಕೊರತೆ ಎದುರಾದಾಗಲೆಲ್ಲ ನೀರು ಬಿಡಿ ಎಂದು ಮಹಾರಾಷ್ಟ್ರ ಸರ್ಕಾರಕ್ಕೆ ಕೇಳಿಕೊಳ್ಳುವುದು ಸರಿ ಅಲ್ಲ. ಅದರ ಬದಲು ನಾವೇ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಾದ ಅವಶ್ಯಕತೆ ಇದೆ ಎಂದು ಹೇಳಿದರು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !