ಸೋಮವಾರ, ಜೂನ್ 1, 2020
27 °C
ಆರ್‌ಸಿ ಆದೇಶ

ನವಿಲುತೀರ್ಥದಿಂದ ಮಲಪ್ರಭಾ ನದಿಗೆ ನೀರು: ಸಿದ್ದರಾಮಯ್ಯ ಮನವಿ ಹಿನ್ನೆಲೆಯಲ್ಲಿ ಕ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಜಿಲ್ಲೆಯ ಸವದತ್ತಿ ಬಳಿಯ ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ನದಿಗೆ ಬುಧವಾರ ಸಂಜೆಯಿಂದ ನೀರು ಬಿಡುಗಡೆ ಮಾಡಲಾಗುತ್ತಿದೆ.

ಏ.12ರವರೆಗೆ ಒಂದು ಟಿಎಂಸಿ ನೀರು ಮಲಪ್ರಭೆಗೆ ಹರಿಯಲಿದೆ. ನಿತ್ಯ ಸರಾಸರಿ ಸಾವಿರ ಕ್ಯುಸೆಜ್‌ ನೀರು ಬಿಡುಗಡೆಗೆ ಉದ್ದೇಶಿಸಲಾಗಿದೆ.

‘ಬಾಗಲಕೋಟೆ ಜಿಲ್ಲೆ ಬಾದಾಮಿ ಮತಕ್ಷೇತ್ರದಲ್ಲಿ ನೀರಿಗೆ ತತ್ವಾರ ಉಂಟಾಗಿದೆ. ಬಹುಗ್ರಾಮಗಳ ಹಾಗೂ ಪಟ್ಟಣಗಳಲ್ಲಿ ಕುಡಿಯುವ ನೀರಿನ ಯೋಜನೆಗೆ ತೊಂದರೆಯಾಗಿದೆ. ಕೊಳವೆಬಾವಿಗಳಲ್ಲೂ ನೀರಿಲ್ಲದಾಗಿದೆ. ಹೀಗಾಗಿ, ಮಲಪ್ರಭಾ ನದಿಗೆ ಮತ್ತು ಕಾಲುವೆಗೆ 15 ದಿನಗಳವರೆಗೆ ನೀರು ಹರಿಸುವಂತೆ ಕೋರಿ, ಮಾಜಿ ಮುಖ್ಯಮಂತ್ರಿಯೂ ಆದ ಕ್ಷೇತ್ರದ ಶಾಸಕ ಸಿದ್ದರಾಮಯ್ಯ ಅವರು ಮಾರ್ಚ್‌ 30ರಂದು ಪ್ರಾದೇಶಿಕ ಆಯುಕ್ತರಿಗೆ ಪತ್ರ ಬರೆದಿದ್ದರು. ಇದನ್ನು ಆಧರಿಸಿ ಪ್ರಾದೇಶಿಕ ಆಯುಕ್ತರು 1 ಟಿಎಂಸಿ ನೀರು ಬಿಡುಗಡೆಗೆ ಮಂಗಳವಾರ ಆದೇಶ ಹೊರಡಿಸಿದ್ದರು.

‘ನೀರನ್ನು ಯಾವುದೇ ಕಾರಣಕ್ಕೂ ಕೃಷಿಗೆ ಬಳಸುವಂತಿಲ್ಲ. ಈ ಬಗ್ಗೆ ಅಧಿಕಾರಿಗಳ ತಂಡ ರಚಿಸಿಕೊಂಡು ನಿಗಾ ವಹಿಸಬೇಕು. ಕಾಲುವೆಗುಂಟ ಅಳವಡಿಸಿರುವ ರೈತರ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಬೇಕು’ ಎಂಬಿತ್ಯಾದಿ ಷರತ್ತುಗಳನ್ನು ವಿಧಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು