ಹೇಮಾವತಿ ಜಲಾಶಯದಿಂದ ನೀರು ಬಿಡುಗಡೆ, ರೈತರಲ್ಲಿ ಸಂತಸ

7

ಹೇಮಾವತಿ ಜಲಾಶಯದಿಂದ ನೀರು ಬಿಡುಗಡೆ, ರೈತರಲ್ಲಿ ಸಂತಸ

Published:
Updated:

ಹಾಸನ: ಗೊರೂರಿನ ಹೇಮಾವತಿ ಜಲಾಶಯದಿಂದ ಶನಿವಾರ ಬೆಳಿಗ್ಗೆ ನೀರು ಹೊರಬಿಡಲಾಯಿತು. 

ಮೂರು ವರ್ಷದ ಬಳಿಕ ಜಲಾಶಯ ಭರ್ತಿಯಾಗಿದೆ. ಅಣೆಕಟ್ಟೆಯ ಆರು ಕ್ರಸ್ಟ್‌ ಗೇಟ್‌ಗಳಿಂದ 15 ಸಾವಿರ ಕ್ಯುಸೆಕ್ ನೀರು ಹರಿಸಲಾಗುತ್ತಿದೆ.‌

ಇದೇ ವೇಳೆ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರು ಸುಬ್ರಹ್ಮಣ್ಯ ಮತ್ತು ಗಣಪತಿ ದೇವರಿಗೆ ಪೂಜೆ ಸಲ್ಲಿಸಿ, ಕ್ರಸ್ಟ್‌ ಗೇಟ್‌ಗಳನ್ನು ತೆರೆದರು. 

ಜಲಾಶಯದ ಗರಿಷ್ಠ ಮಟ್ಟ 2922 ಅಡಿ. ಜಲಾನಯನ ಪ್ರದೇಶಗಳಾದ ಸಕಲೇಶಪುರ, ಮೂಡಿಗೆರೆ ಭಾಗದಲ್ಲಿ ಮಳೆ ಬಿರುಸುಗೊಂಡಿರುವುದರಿಂದ ಅಣೆಕಟ್ಟೆಗೆ 24 ಸಾವಿರ ಕ್ಯುಸೆಕ್ ನೀರು ಬರುತ್ತಿದೆ. 

ಅಣೆಕಟ್ಟೆ ನಿರ್ಮಾಣದ ಬಳಿಕ ಇದೇ ಮೊದಲು ಬಾರಿಗೆ ಅಣ್ಣೆಕಟ್ಟೆ ತುಂಬಿದೆ. 2013ರಲ್ಲಿ ಜುಲೈ 26ಕ್ಕೆ ಭರ್ತಿಯಾಗಿದ್ದು ಈ ಹಿಂದಿನ ದಾಖಲೆಯಾಗಿತ್ತು .

ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ಹೊರ ಹರಿವಿನ ಪ್ರಮಾಣ ಹೆಚ್ಚಿಸಲಾಗುವುದು ಎಂದು ಅಣೆಕಟ್ಟೆ ಅಧೀಕ್ಷಕ ಎಂಜಿನಿಯರ್ ತಿಳಿಸಿದರು.

ಮುಂಜಾಗ್ರತಾ ಕ್ರಮವಾಗಿ ನದಿ ಪಾತ್ರದ ಜನರನ್ನು ಸ್ಥಳಾಂತರಿಸಲಾಗಿದೆ ಎಂದರು. 

ಅಚ್ಚುಕಟ್ಟು ಭಾಗದ ರೈತರು ಮೂರು ವರ್ಷದಿಂದ ಬೆಳೆ ಬೆಳದಿರಲಿಲ್ಲ. ಇದೀಗ ಅಣ್ಣೆಕಟ್ಟೆಯಿಂದ ನೀರು ಬಿಟ್ಟಿರುವುದಕ್ಕೆ ರೈತರಲ್ಲಿ ಸಂತಸ ಮೂಡಿದೆ. 

ಬರಹ ಇಷ್ಟವಾಯಿತೆ?

 • 16

  Happy
 • 2

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !