ಭಾನುವಾರ, ಫೆಬ್ರವರಿ 28, 2021
23 °C

ಕೆರೆಗಳ ಸುಧಾರಣೆಗೆ ಆದ್ಯತೆ, ನೀರಾವರಿ ಯೋಜನೆಗಳಿಗೆ ₹17 ಸಾವಿರ ಕೋಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ನೀರಾವರಿಗೆ ₹17 ಸಾವಿರ ಕೋಟಿ ಅನುದಾನ ನೀಡಲಾಗಿದೆ. ರಾಜ್ಯದಾದ್ಯಂತ ಕೆರೆಗಳನ್ನು ತುಂಬಿಸುವುದಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಬಜೆಟ್‌ನಲ್ಲಿ ತಿಳಿಸಿದ್ದಾರೆ.

ಏತ ನೀರಾವರಿ ಯೋಜನೆಗಳಿಗೆ ₹ 1563 ಕೋಟಿ ರೂಗಳನ್ನು ಮೀಸಲಿಡಲಾಗಿದೆ. ಕೆರೆ ತುಂಬಿಸುವುದು ಸೇರಿದಂತೆ ಕೆರೆ ಅಭಿವೃದ್ಧಿ ಯೋಜನೆಗಳಿಗೆ ಒಟ್ಟು 2 ಸಾವಿರ ಕೋಟಿ ರೂಪಾಯಿ, ಕಾಲುವೆಗಳ ಅಭಿವೃದ್ಧಿ ಮತ್ತು ಬ್ಯಾರೆಜ್‌ ನಿರ್ಮಾಣಕ್ಕೆ ಸಾವಿರ ಕೋಟಿ ರೂಪಾಯಿ ತೆಗೆದಿರಿಸಲಾಗಿದೆ. ನದಿಗಳ ಪುನಶ್ಚೇತನ ಹಾಗೂ ಪ್ರವಾಸೋದ್ಯಮ ಅಭಿವೃದ್ಧಿಗಾಗಿ 200 ಕೋಟಿ ರೂಪಾಯಿ ನೀಡಲಾಗಿದೆ. 

ಶಿವಮೊಗ್ಗ, ಬೀದರ್‌ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿನ ಕೆರೆಗಳ ಸುಧಾರಣೆಗೆ ಮುಂದಿನ 3 ವರ್ಷಗಳಲ್ಲಿ ₹300 ಕೋಟಿ ಅನುದಾನ ನೀಡಲಾಗಿದೆ. ಕೆ.ಸಿ.ವ್ಯಾಲಿ ಅಭಿವೃದ್ಧಿಗೆ 40 ಕೋಟಿ ರೂಪಾಯಿ ನೀಡಲಾಗಿದೆ. 

ಅಂತರ್ಜಲ ಕುಸಿತವಾಗಿರುವ ತಾಲ್ಲೂಕುಗಳಲ್ಲಿ ಅಂತರ್ಜಲ ವೃದ್ಧಿಸಲು ಚೆಕ್‌ ಡ್ಯಾಂ ಮತ್ತು ಬ್ಯಾರೇಜ್‌ ನಿರ್ಮಾಣ ಹಾಗೂ ನೀರು ಮರುಪೂರಣಕ್ಕೆ ₹200 ಕೋಟಿ ತೆಗೆದಿರಿಸಲಾಗಿದೆ. 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.