ಹಂಪಿ ಪುರಂದರ ಮಂಟಪ ಮುಳುಗಡೆ

7

ಹಂಪಿ ಪುರಂದರ ಮಂಟಪ ಮುಳುಗಡೆ

Published:
Updated:

ಹೊಸಪೇಟೆ: ತುಂಗಭದ್ರಾ ಜಲಾಶಯದಿಂದ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿಸುತ್ತಿರುವ ಕಾರಣ ತಾಲ್ಲೂಕಿನ ಹಂಪಿ ಬಳಿಯ ಕೆಲ ಸ್ಮಾರಕಗಳು ಗುರುವಾರ ನೀರಿನಲ್ಲಿ ಮುಳುಗಡೆಯಾಗಿವೆ.

ಹಂಪಿಯ ಪುರಂದರದಾಸರ ಮಂಟಪ, ವಿಜಯನಗರ ಕಾಲದ ಕಾಲು ಸೇತುವೆ ಹಾಗೂ ವಿರೂಪಾಕ್ಷ ದೇಗುಲಕ್ಕೆ‌ ಹೊಂದಿಕೊಂಡಂತೆ ಇರುವ ಪಿತೃಪಿಂಡ ಪ್ರಧಾನ ಮಾಡುವ ಮಂಟಪಗಳು ನೀರಿನಲ್ಲಿ ಸಂಪೂರ್ಣ ಮುಳುಗಿವೆ. ನದಿಯಲ್ಲಿ ನೀರು ಅಪಾಯದ ಮಟ್ಟದಲ್ಲಿ ಹರಿಯುತ್ತಿರುವ ಕಾರಣ ತೆಪ್ಪ, ದೋಣಿ ಸಂಚಾರ ಸ್ಥಗಿತಗೊಂಡಿದೆ. 

‘ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. 1,633 ಅಡಿ ನೀರು ಸಂಗ್ರಹ ಸಾಮರ್ಥ್ಯದ ಅಣೆಕಟ್ಟೆಗೆ ಇನ್ನೆರಡು ಅಡಿ ನೀರು ಬಂದರೆ ಭರ್ತಿಯಾಗಲಿದೆ. ಒಳಹರಿವು ಹೆಚ್ಚಿರುವ ಕಾರಣ ಮುಂದಿನ 24 ಗಂಟೆಗಳಲ್ಲಿ 50 ಸಾವಿರದಿಂದ 1.50 ಲಕ್ಷ ಕ್ಯುಸೆಕ್‌ ನೀರು ನದಿಗೆ ಹರಿಸಲಾಗುವುದು. ನದಿ ಪಾತ್ರದ ಜನ ಸುರಕ್ಷಿತ ಸ್ಥಳಿಗಳಿಗೆ ತೆರಳಬೇಕು’ ಎಂದು ತುಂಗಭದ್ರಾ ಜಲಾಶಯ ಆಡಳಿತ ಮಂಡಳಿ ಅಧ್ಯಕ್ಷ ಡಿ. ರಂಗಾರೆಡ್ಡಿ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !