ಬುಧವಾರ, ಏಪ್ರಿಲ್ 21, 2021
33 °C

ರಾಮಲಿಂಗಾರೆಡ್ಡಿ ನಿರ್ಧಾರ ಆಘಾತ ತಂದಿದೆ: ಎಂಟಿಬಿ ನಾಗರಾಜ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜೀನಾಮೆ‌ ವಾಪಸ್ ಪಡೆದ ಕಾಂಗ್ರೆಸ್ ಶಾಸಕ ರಾಮಲಿಂಗಾರೆಡ್ಡಿ ಅವರ ನಿರ್ಧಾರದಿಂದ ನಮಗೆ ಆಘಾತವಾಗಿದೆ ಎಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಚಿವ ಎಂಟಿಬಿ ನಾಗರಾಜ್ ಹೇಳಿದ್ದಾರೆ.

ರಾಮಲಿಂಗಾರೆಡ್ಡಿ ನಾಯಕತ್ವದಲ್ಲಿಯೇ ಬೆಂಗಳೂರು ಶಾಸಕರ ಸಭೆ ನಡೆದಿತ್ತು. ಕಾಂಗ್ರೆಸ್ ಪಕ್ಷದಲ್ಲಿ ಹಿರಿಯರನ್ನು ಕಡೆಗಣಿಸಲಾಗಿದ್ದು ನಾವೆಲ್ಲರೂ ರಾಜೀನಾಮೆ ನೀಡುವ ನಿರ್ಧಾರ ಮಾಡಿದ್ದೆವು. ಇದೀಗ ರಾಮಲಿಂಗಾರೆಡ್ಡಿ ತಮ್ಮ ತೀರ್ಮಾನದಿಂದ‌ ಹಿಂದೆ ಸರಿದಿರುವುದು‌ ನಮಗೆ ಆಘಾತ‌ ಉಂಟು ಮಾಡಿದೆ ಎಂದು ಅವರು ತಿಳಿಸಿದ್ದಾರೆ.

ನಾವು ನಮ್ಮ‌ ನಿರ್ಧಾರದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ನಾಗರಾಜ್ ಸ್ಪಷ್ಟಪಡಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.