ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಅಸಮಾಧಾನಿತರು ಬಂದರೆ ಸರ್ಕಾರ ರಚನೆ’

Last Updated 27 ಮೇ 2019, 10:19 IST
ಅಕ್ಷರ ಗಾತ್ರ

ಹೊಸಪೇಟೆ: ‘ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಕ್ಷದಲ್ಲಿನ ಅಸಮಾಧಾನಿತರು ನಮ್ಮ ಪಕ್ಷಕ್ಕೆ ಬಂದರೆ ರಾಜ್ಯದಲ್ಲಿ ಸರ್ಕಾರ ರಚಿಸಿ ಉತ್ತಮ ಆಡಳಿತ ಕೊಡುತ್ತೇವೆ. ಚುನಾವಣೆಗೆ ಹೋದರೆ ಜನರ ಮೇಲೆ ಆರ್ಥಿಕ ಹೊರೆ ಬೀಳುತ್ತದೆ’ ಎಂದು ಶಾಸಕ ಬಿ. ಶ್ರೀರಾಮುಲು ಹೇಳಿದರು.

ತಾಲ್ಲೂಕಿನ ಕಮಲಾಪುರ ಪಟ್ಟಣದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮೂರೂ ಬಿಟ್ಟಿರುವ ಮಂದಿಗೆ (ಮುಖ್ಯಮಂತ್ರಿ ಕುಮಾರಸ್ವಾಮಿಗೆ) ರಾಜೀನಾಮೆ ಕೊಡುವಂತೆ ಒತ್ತಾಯಿಸುವುದಿಲ್ಲ. ಆದರೆ, ಎರಡೂ ಪಕ್ಷಗಳ ಶಾಸಕರು, ಪಕ್ಷೇತರರು ಅವರಿಂದ ದೂರವಾಗಿದ್ದಾರೆ. ಅವರು ಬೆಂಬಲ ಕೊಟ್ಟರೆ ಸರ್ಕಾರ ರಚಿಸುತ್ತೇವೆ’ ಎಂದು ಭರವಸೆ ವ್ಯಕ್ತಪಡಿಸಿದರು.

‘ಈಗ ಮೈತ್ರಿ ಸರ್ಕಾರ ತೊಲಗದಿದ್ದರೆ ಈ ಹಿಂದಿನಂತೆ ಇನ್ನೂ ನಾಲ್ಕು ವರ್ಷ ಜನ ಇವರ ನಾಟಕ ನೋಡಿಕೊಂಡು ಇರಬೇಕಾಗುತ್ತದೆ. ಹಾಗಾಗಿ ಅವರು ಅಧಿಕಾರದಿಂದ ತೊಲಗುವುದು ಲೇಸು. ಎಚ್‌.ಡಿ.ಕೆ. ರಾಜೀನಾಮೆ ಕೊಡಬೇಕು. ನಾಟಕವಾಡುವುದು ಬಿಡಬೇಕು. ದೆಹಲಿ ಪರೇಡ್‌ ಮಾಡಿರುವುದು ಸಾಕು’ ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT