ಶುಕ್ರವಾರ, ಅಕ್ಟೋಬರ್ 18, 2019
23 °C

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಶತಃಸಿದ್ಧ: ಸಚಿವ ಈಶ್ವರಪ್ಪ

Published:
Updated:

ಬೆಂಗಳೂರು: ರಾಜ್ಯದಲ್ಲಿ ಗೋಹತ್ಯೆ ನಿಷೇಧ ಮಾಡುವುದು ಶತಃಸಿದ್ಧ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಶ್ರೀರಾಮ ಸೇನೆ ನಗರದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಹಿಂದೆ ನಮ್ಮ ಸರ್ಕಾರದ ಅವಧಿಯಲ್ಲಿ ಗೋಹತ್ಯೆ ನಿಷೇಧ ಮಾಡಿದ್ದೆವು. ಆದರೆ, ಬಳಿಕ ಕಾಂಗ್ರೆಸ್ ಸರ್ಕಾರ ಅದನ್ನು ರದ್ದುಗೊಳಿಸಿತ್ತು. ಇದೀಗ ನಮಗೆ ಅವಕಾಶ ಸಿಕ್ಕಿದ್ದು, ಗೋವಿನ ಸಂತತಿ ಉಳಿವಿಗೆ ನಿಷೇಧವನ್ನು ಪುನಃ ಜಾರಿ ಮಾಡುತ್ತೇವೆ’ ಎಂದು ಹೇಳಿದರು.

ಇದನ್ನೂ ಓದಿ: ನೆರೆ: ಹಳ್ಳಿಗಳ ಸ್ವಚ್ಛತೆಗೆ ತಲಾ ₹ 1 ಲಕ್ಷ: ಸಚಿವ ಕೆ.ಎಸ್. ಈಶ್ವರಪ್ಪ

ಎನ್‌ಡಿಎ ಸರ್ಕಾರದ ಅವಧಿಯಲ್ಲಿ ರಾಮ ಮಂದಿರವನ್ನು ಕಟ್ಟಿಯೇ ತೀರುತ್ತೇವೆ. ಅದು ಹಿಂದುತ್ವದ ಸಂಕೇತ ಕೂಡಾ ಹೌದು. ನರೇಂದ್ರ ಮೋದಿ ಅವರ ಅವಧಿಯಲ್ಲಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನೂ ಭಾರತ ವಶಪಡಿಸಿಕೊಳ್ಳಲಿದೆ ಎಂದು ಈಶ್ವರಪ್ಪ ಹೇಳಿದರು.

Post Comments (+)