ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂದಿರಾ ಕ್ಯಾಂಟೀನ್‌ ಮುಚ್ಚುವುದಿಲ್ಲ: ಬಿಎಸ್‌ವೈ ಭರವಸೆ

Last Updated 28 ಆಗಸ್ಟ್ 2019, 19:06 IST
ಅಕ್ಷರ ಗಾತ್ರ

ಬೆಂಗಳೂರು: ಇಂದಿರಾ ಕ್ಯಾಂಟೀನ್‌ ಮುಚ್ಚುವ ಉದ್ದೇಶ ಸರ್ಕಾರಕ್ಕಿಲ್ಲ. ಆದರೆ, ಅಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಇಂದಿರಾ ಕ್ಯಾಂಟೀನ್‌ ಮುಚ್ಚುವ ಪ್ರಯತ್ನ ನಡೆಸಿದರೆ, ಹೋರಾಟ ನಡೆಸುವುದಾಗಿ ಕಾಂಗ್ರೆಸ್‌ ಮುಖಂಡರ ಹೇಳಿಕೆಯ ಹಿನ್ನೆಲೆಯಲ್ಲಿ ಯಡಿಯೂರಪ್ಪ ಬುಧವಾರ ಪ್ರತಿಕ್ರಿಯೆ ನೀಡಿದರು.

ಕ್ಯಾಂಟೀನ್‌ನಲ್ಲಿ ಸಾಕಷ್ಟು ಅಕ್ರಮಗಳು ನಡೆದಿರುವ ಆರೋಪ ಬಂದಿರುವುದರಿಂದ ತನಿಖೆಗೆ ಸೂಚಿಸಲಾಗಿದೆ. ಆದರೆ, ಕ್ಯಾಂಟಿನ್‌ ಮುಚ್ಚುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

‘ಇಂದಿರಾ ಕ್ಯಾಂಟೀನ್‌ಗೆ ಅನುದಾನ ತಡೆ ಹಿಡಿಯಲಾಗಿದೆ ಎಂಬ ಆರೋಪದಲ್ಲಿ ಯಾವುದೇ ಹುರುಳಿಲ್ಲ. ನಮ್ಮ ಸರ್ಕಾರ ಅನುದಾನ ತಡೆ ಹಿಡಿಯುವ ಕೆಲಸವನ್ನೂ ಮಾಡಿಲ್ಲ. ಇಂದಿರಾ ಕ್ಯಾಂಟೀನ್‌ ಹೆಸರನ್ನು ಬದಲಿಸುವ ಚಿಂತನೆಯೂ ಇಲ್ಲ’ ಎಂದೂ ಯಡಿಯೂರಪ್ಪ ಹೇಳಿದರು.

ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ಇಂದಿರಾ ಕ್ಯಾಂಟೀನ್ ಆರಂಭಿಸಲಾಗಿತ್ತು. ರಾಜ್ಯ ಸರ್ಕಾರ 2019–20 ನೇ ಸಾಲಿನಲ್ಲಿ ಅನುದಾನ ನೀಡಿಲ್ಲ. ಇನ್ನೊಂದೆಡೆ, ಬಿಬಿಎಂಪಿಯೂ ಈ ಸಾಲಿನ ಬಜೆಟ್‌ನಲ್ಲಿ ಅನುದಾನ ನೀಡಿಲ್ಲ. ಇದರಿಂದ ಇಂದಿರಾ ಕ್ಯಾಂಟೀನ್‌ ಸ್ಥಗಿತಗೊಳ್ಳಬಹುದು ಎಂಬ ವದಂತಿ ಹರಡಿತ್ತು.

ಅವ್ಯವಸ್ಥೆ ಸರಿಪಡಿಸುತ್ತೇವೆ: ಇಂದಿರಾ ಕ್ಯಾಂಟೀನ್‌ನಲ್ಲಿ ನಡೆದಿರುವ ಅವ್ಯವಹಾರ ಮಾಧ್ಯಮಗಳ ಮೂಲಕ ಬೆಳಕಿಗೆ ಬಂದಿದೆ. ನಡೆದಿರುವ ಅಕ್ರಮಗಳು, ಆಹಾರದ ಗುಣಮಟ್ಟದ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ. ಅಲ್ಲಿ ಆಗಿರುವ ಅವ್ಯವಸ್ಥೆಗಳನ್ನು ಸರಿಪಡಿಸುತ್ತೇವೆಯೇ ಹೊರತು, ಮುಚ್ಚುವ ಉದ್ದೇಶವಿಲ್ಲ ಎಂದು ಉಪಮುಖ್ಯಮಂತ್ರಿ ಡಾ.ಅಶ್ವತ್ಥ ನಾರಾಯಣ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

ಸಿಎಂಗೆ ಪತ್ರ: ಹಸಿದ ಬಡವರಿಗೆ ಅನ್ನ ನೀಡುವ ಇಂದಿರಾ ಕ್ಯಾಂಟೀನ್‌ ಮುಚ್ಚಬಾರದು. ಈ ಸಂಬಂಧ ಮುಖ್ಯಮಂತ್ರಿಯವರಿಗೆ‍ಪತ್ರ ಬರೆಯುತ್ತೇನೆ. ಒಂದು ವೇಳೆ ಹಠಕ್ಕೆ ಬಿದ್ದು, ಇಂದಿರಾ ಕ್ಯಾಂಟೀನ್ ಮುಚ್ಚಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಕಾಂಗ್ರೆಸ್‌ ನಾಯಕ ಸಿದ್ದರಾಮಯ್ಯ ಮತ್ತೊಮ್ಮೆ ಎಚ್ಚರಿಕೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT