ಶುಕ್ರವಾರ, ಫೆಬ್ರವರಿ 26, 2021
20 °C

ಕಲಾವಿದರಿಗೆ ಗೌರವ: ಮುಖ್ಯಮಂತ್ರಿ ಯಡಿಯೂರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಕಲಾವಿದರ ಅಭಿವ್ಯಕ್ತಿ ಸ್ವಾತಂತ್ರ್ಯರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ. ಅವರಿಗೆ ಅಗೌರವ ತರುವಂತಹ ಯಾವುದೇ ಪ್ರಯತ್ನಕ್ಕೆ ಅವಕಾಶ ನೀಡುವುದಿಲ್ಲ’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ. ವಿವಿಧ ಅಕಾಡೆಮಿಗಳಿಗೆ ನೇಮಕ ಮಾಡುವಾಗ ‘ಮನೆಹಾಳು’ ಜನರನ್ನು ದೂರ ಇಟ್ಟಿದ್ದೇವೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ ಹೇಳಿಕೆ ನೀಡಿದ್ದನ್ನು ಖಂಡಿಸಿ ಕಲಾವಿದರು ಹಾಗೂ ಸಾಹಿತಿಗಳನ್ನು ಒಳಗೊಂಡ ನಿಯೋಗ ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಗುರುವಾರ ಮನವಿ ಸಲ್ಲಿಸಿತ್ತು. ಈ ಮನವಿಗೆ ಸ್ಪಂದಿಸಿ ಅವರು ಟ್ವೀಟ್ ಮಾಡಿದ್ದಾರೆ.

‘ರಾಜ್ಯದಲ್ಲಿ ಕಲೆ, ಸಾಹಿತ್ಯ, ಸಂಸ್ಕೃತಿಯನ್ನು ಶ್ರೀಮಂತಗೊಳಿಸಲು ಸಾಹಿತಿಗಳು, ಕಲಾವಿದರು ನೀಡಿರುವ ಕೊಡುಗೆ ಬಗ್ಗೆ ಅಪಾರ ಅಭಿಮಾನ, ಗೌರವ ಇದೆ’ ಎಂದು ಹೇಳಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು