ಇಂದಿನಿಂದ 9ರವರೆಗೆ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ!

7

ಇಂದಿನಿಂದ 9ರವರೆಗೆ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ!

Published:
Updated:

ಬೆಂಗಳೂರು: ಅಕ್ಟೋಬರ್ 5ರಿಂದ 9ರವರೆಗೆ ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯಲ್ಲಿ ಶುಕ್ರವಾರ ಸಂಜೆ ವೇಳೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಮತ್ತು ಲಕ್ಷದ್ವೀಪ ಪ್ರದೇಶದಿಂದ ಕರಾವಳಿ ತೀರದವರೆಗೆ ಭಾರಿ ಎತ್ತರದ ಅಲೆಗಳು ಏಳುವ ಸಾಧ್ಯತೆ ಇದೆ.

ಹೀಗಾಗಿ, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ಸೂಚನೆ ನೀಡಲಾಗಿದೆ. ಈಗಾಗಲೇ ಆಳ ಸಮುದ್ರ ಮೀನುಗಾರಿಕೆಗೆ ಹೋಗಿರುವವರು ಶುಕ್ರವಾರ (ಅಕ್ಟೋಬರ್ 5) ಸಂಜೆಯ ಒಳಗೆ ವಾಪಸ್ ಆಗುವಂತೆ ಸೂಚನೆ ನೀಡಿದೆ.

* ಇದನ್ನೂ ಓದಿ...

ಕರಾವಳಿಯಲ್ಲಿ ಮಳೆ ಅಬ್ಬರ, ಕಡಲಿಗೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ 

ಅರಬ್ಬಿ ಸಮುದ್ರದಲ್ಲಿ ಚಂಡಮಾರುತ ಸೃಷ್ಟಿಯಾಗಿರುವುದರಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗುರುವಾರ ಸಂಜೆಯಿಂದ ಮಳೆ ಆರಂಭವಾಗಿದೆ. ಗುಡುಗು–ಸಿಡಿಲು ಸಹಿತ ಮಳೆ ಸುರಿದಿದ್ದು, ತಂಪಾದ ವಾತಾವರಣ ನಿರ್ಮಿಸಿದೆ.

ಬರಹ ಇಷ್ಟವಾಯಿತೆ?

 • 29

  Happy
 • 1

  Amused
 • 0

  Sad
 • 2

  Frustrated
 • 2

  Angry

Comments:

0 comments

Write the first review for this !