ಖರ್ಗೆ ವಿರುದ್ಧ ಮೋದಿ ನಿಂತರೂ ಸ್ವಾಗತ: ಪ್ರಿಯಾಂಕ್‌ ಖರ್ಗೆ

ಸೋಮವಾರ, ಮಾರ್ಚ್ 25, 2019
33 °C

ಖರ್ಗೆ ವಿರುದ್ಧ ಮೋದಿ ನಿಂತರೂ ಸ್ವಾಗತ: ಪ್ರಿಯಾಂಕ್‌ ಖರ್ಗೆ

Published:
Updated:

ಮದ್ದೂರು: ‘ಕಲಬುರ್ಗಿ ಲೋಕಸಭೆ ಕ್ಷೇತ್ರದಲ್ಲಿ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಉಮೇಶ್ ಜಾಧವ್ ಮಾತ್ರವಲ್ಲದೆ, ಪ್ರಧಾನಿ ನರೇಂದ್ರ ಮೋದಿ ಸ್ಪರ್ಧೆ ‌ಮಾಡಿದರೂ ಸ್ವಾಗತಿಸುತ್ತೇವೆ’ ಎಂದು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್‌ ಖರ್ಗೆ ಇಲ್ಲಿ ಶನಿವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ‘ಪ್ರಜಾಪ್ರಭುತ್ವದಲ್ಲಿ ಯಾರು ಯಾವ ಕ್ಷೇತ್ರದಲ್ಲಾದರೂ ಸ್ಪರ್ಧೆ ಮಾಡಬಹುದು. ಉಮೇಶ್‌ ಜಾಧವ್‌ ಸ್ಪರ್ಧಿಸುವ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ’ ಎಂದರು.

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ‌ಸುಮಲತಾ ಅವರಿಗೆ ಟಿಕೆಟ್‌ ನೀಡುವ ವಿಚಾರ ಹೈಕಮಾಂಡ್‌ಗೆ ಬಿಟ್ಟದ್ದು. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಜೆಡಿಎಸ್‌ ವರಿಷ್ಠ ಎಚ್.ಡಿ.ದೇವೇಗೌಡ ಚರ್ಚೆ ಮಾಡಿ ಟಿಕೆಟ್ ಹಂಚಿಕೆ ಮಾಡುತ್ತಾರೆ ಎಂದು ಸ್ಪಷ್ಟಪಡಿಸಿದರು.

‘ಬಡ್ತಿ ಮೀಸಲಾತಿ ವಿಚಾರದಲ್ಲಿ ನೌಕರರಿಗೆ ನ್ಯಾಯ ಒದಗಿಸುವ ಪ್ರಯತ್ನ ಮಾಡಿದ್ದೇವೆ. ಪರಿಶಿಷ್ಟ ಜಾತಿ, ಪಂಗಡ ಹಾಗೂ ಅಹಿಂದ ಸಮುದಾಯಗಳಿಗೆ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳಲಾಗುವುದು’ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !