ಬುಧವಾರ, ಆಗಸ್ಟ್ 21, 2019
22 °C

ಅಪಾಯಕಾರಿ ರೀತಿಯಲ್ಲಿ ಬೈಕ್ ವ್ಹೀಲಿಂಗ್‌: ಯುವಕ ಬಂಧನ

Published:
Updated:
Prajavani

ಬೆಂಗಳೂರು: ದೇವನಹಳ್ಳಿ ಬಳಿ ಬೈಕ್ ವ್ಹೀಲಿಂಗ್ ಮಾಡುತ್ತಿದ್ದ ಆರೋ‍ಪದಡಿ ಸತೀಶ್‌ಕುಮಾರ್ (19) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

‘ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪದಲ್ಲೇ ಆರೋಪಿ, ಅಪಾಯಕಾರಿ ರೀತಿಯಲ್ಲಿ ಬೈಕ್ ವ್ಹೀಲಿಂಗ್ ಮಾಡುತ್ತಿದ್ದ’ ಎಂದು ಪೊಲೀಸರು ಹೇಳಿದರು.

‘ಆರೋಪಿಯು ವ್ಹೀಲಿಂಗ್ ಮಾಡುತ್ತಿದ್ದ ದೃಶ್ಯವನ್ನು ಸಾರ್ವಜನಿಕರೊಬ್ಬರು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡಿದ್ದರು. ಸಾಮಾಜಿಕ ಜಾಲತಾಣದ ಮೂಲಕ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ’ ಎಂದರು.

‘ವ್ಹೀಲಿಂಗ್ ಮಾಡಲು ಬಳಸಿದ್ದ ಕೆಎ 03, ಕ್ಯೂ 9382 ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

Post Comments (+)